ರೋಹಿತ್ ಶರ್ಮಾ-ಕೆಎಲ್ ರಾಹುಲ್ 
ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧ ಟಿ-20 ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್ ಶರ್ಮಾ ನಾಯಕ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಂಗಳವಾರ ನ್ಯೂಜಿಲ್ಯಾಂಡ್ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ ಟಿ-20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ.

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮಂಗಳವಾರ ನ್ಯೂಜಿಲ್ಯಾಂಡ್ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ ಟಿ-20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಆಯ್ಕೆ ಮಾಡಿದೆ.

ಉಪನಾಯಕನ ಜವಾಬ್ದಾರಿ ಕೆಎಲ್ ರಾಹುಲ್ ಅವರಿಗೆ ವಹಿಸಲಾಗಿದೆ. 16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಇನ್ನು ಇದೇ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ವೆಂಕಟೇಶ್ ಅಯ್ಯರ್ ಹಾಗೂ ಅವೇಶ್ ಖಾನ್ ಅವರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಯುಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್​ಗಳಾಗಿ ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ತಂಡದಲ್ಲಿದ್ದಾರೆ.

ಭಾರತದ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT