ಸಂಗ್ರಹ ಚಿತ್ರ 
ಕ್ರಿಕೆಟ್

ಪಾಕಿಸ್ತಾನ ಟಿ-20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಫಾಫ್ ಡು ಪ್ಲೆಸಿಸ್ ಭವಿಷ್ಯ

ಟಿ-20 ವಿಶ್ವಕಪ್-2021 ಅಂತಿಮ ಹಂತ ತಲುಪಿದೆ.  ಇಂದು ನಡೆದ ಮೊದಲ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಗೆದ್ದಿದ್ದು, ನಾಳೆ  ಪಾಕಿಸ್ತಾನ  ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಸೆಮಿಫೈನಲ್ ನಡೆಯಲಿದೆ. 

ದುಬೈ: ಟಿ-20 ವಿಶ್ವಕಪ್-2021 ಅಂತಿಮ ಹಂತ ತಲುಪಿದೆ. ಇಂದು ನಡೆದ ಮೊದಲ ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಗೆದ್ದಿದ್ದು, ನಾಳೆ ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಸೆಮಿಫೈನಲ್ ನಡೆಯಲಿದೆ. 

ಎರಡನೇ ಸೆಮೀಸ್ ನಲ್ಲಿ ಗೆಲ್ಲುವ ತಂಡ ನ್ಯೂಜಿಲ್ಯಾಂಡ್ ವಿರುದ್ಧ ನವೆಂಬರ್ 14 ರಂದು ಮೆಗಾ ಫೈನಲ್‌ನಲ್ಲಿ ಮುಖಾಮುಖಿಯಾಗಲಿದೆ. ಆದರೆ, ಸೆಮಿಸ್‌ ತಲುಪಿರುವ ಪಾಕಿಸ್ತಾನ ಫೈನಲ್ ಪ್ರವೇಶಿಸಿ ಅಲ್ಲೂ ಚಾಂಪಿಯನ್ ಆಗಿ ಹೊರಹೊಮ್ಮಲಿದೆಯಾ? ಯಾವ ತಂಡ ಟೈಟಲ್‌ ಫೇವರಿಟ್ ಆಗಲಿದೆ ಎಂಬುದನ್ನು ಕ್ರಿಕೆಟ್ ತಜ್ಞರು, ಮಾಜಿ, ಸ್ಟಾರ್ ಕ್ರಿಕೆಟಿಗರು ಭವಿಷ್ಯ ನುಡಿದಿದ್ದಾರೆ.

ಈ ಕ್ರಮದಲ್ಲಿ  ಟಿ-20 ವಿಶ್ವಕಪ್-2021 ಟ್ರೋಫಿಯನ್ನು ಪಾಕಿಸ್ತಾನ ವಶಪಡಿಸಿಕೊಳ್ಳಲಿದೆ ಎಂದು ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಫಾಫ್ ಡು ಪ್ಲೆಸಿಸ್ ಭವಿಷ್ಯ ನುಡಿದಿದ್ದಾರೆ.

ನ್ಯೂಜಿಲೆಂಡ್ ತಂಡ ಸಹ ಟ್ರೋಫಿ ಗೆಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.  ಅದೇ ರೀತಿ ಈ ಮೆಗಾ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡದ ಪ್ರದರ್ಶನದ ಬಗ್ಗೆ ಡುಪ್ಲೆಸಿಸ್ ಶ್ಲಾಘಿಸಿದ್ದಾರೆ.   

ಟಿ-20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಬೌಲಿಂಗ್ ದಾಳಿ ಅತ್ಯುತ್ತಮವಾಗಿದೆ ಎಂದು ಅವರು ಕೊಂಡಾಡಿದ್ದಾರೆ. ಈ ಟೂರ್ನಿಯ ಸೂಪರ್ 12ರಲ್ಲಿ ಆಡಿದ 5 ಪಂದ್ಯಗಳಲ್ಲಿ 4ರಲ್ಲಿ ದಕ್ಷಿಣ ಆಫ್ರಿಕಾ ಗೆದ್ದಿದೆ. ಆದರೂ ಸೆಮಿಸ್‌ಗೆ ಅರ್ಹತೆ ಪಡೆಯಲು ಸಾಧ್ಯವಾಗಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!