ಕ್ರಿಕೆಟ್

ಈ ಬಾರಿಯ ಟಿ20 ವಿಶ್ವಕಪ್ ನಮಗೆ ಒಳ್ಳೆಯ ಪಾಠ ಕಲಿಸಿತು: ಕೆ.ಎಲ್ ರಾಹುಲ್

Harshavardhan M

ನಮೀಬಿಯಾ ವಿರುದ್ಧ ಗೆಲ್ಲುವ ಮೂಲಕ ತನ್ನ ಅಂತಿಮ ಪಂದ್ಯವನ್ನು ಮುಗಿಸಿ ಭಾರತ ತಂಡವು ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದೆ. ಈ ಬಾರಿಯ ವಿಶ್ವಕಪ್ ಪಂದ್ಯದ ಬಗ್ಗೆ ಮಾತನಾಡಿರುವ ಕ್ರಿಕೆಟಿಗ ಕೆ.ಎಲ್ ರಾಹುಲ್ ಇಲ್ಲಿ ನಾವು ಸಾಕಷ್ಟು ಕಲಿತಿದ್ದೇವೆ ಎಂದು ಹೇಳಿದ್ದಾರೆ. 

ಈ ಬಗ್ಗೆ  ಕೂ ಮಾಡಿರುವ ಕ್ರಿಕೆಟಿಗ ಕೆ.ಎಲ್. ರಾಹುಲ್ 'ನಮಗೆ ಇದೊಂದು ಆದರ್ಶವಾದ ವಿಶ್ವಕಪ್‌ ಆಗಿರಲಿಲ್ಲ, ಆದರೆ ನಾವು ಕಲಿತೆವು ಮತ್ತು ಬೆಳೆದೆವು. ಪ್ರೀತಿ ಮತ್ತು ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು. ನಾವು ಕ್ರಿಕೆಟ್ ಪಟುಗಳಾಗಿ ಬೆಳೆಯಲು ಸಹಾಯ ಮಾಡಿದ ನಮ್ಮ ಕೋಚ್‌ಗಳಿಗೆ ಕೃತಜ್ಞತೆಗಳು. ತಂಡವನ್ನು ಮುನ್ನಡೆಸಿದ ಮತ್ತು ನಮಗೆ ಎಲ್ಲ ರೀತಿಯ ಬೆಂಬಲ ನೀಡಿದ ವಿರಾಟ್ ಕೊಹ್ಲಿ ಅವರಿಗೆ ನಮ್ಮ ಅನಂತ ಕೃತಜ್ಞತೆಗಳು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. 

ಸೆಮಿಫೈನಲ್ ಹಂತಕ್ಕೆ ಪ್ರವೇಶಿಸುವಲ್ಲಿ ವಿಫಲವಾದ ಭಾರತ ತಂಡವು ಸತತ ಮೂರನೇ ಗೆಲುವಿನೊಂದಿಗೆ ವಿಶ್ವಕಪ್ ಅಭಿಯಾನವನ್ನು ಕೊನೆಗೊಳಿಸಿತ್ತು. ಐದು ಪಂದ್ಯಗಳಲ್ಲಿ ಒಟ್ಟು ಆರು ಅಂಕಗಳನ್ನು ಕಲೆ ಹಾಕಿತ್ತು. ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಸೋಲು ಅನುಭವಿಸಿರುವುದು ಭಾರತದ ವಿಶ್ವಕಪ್ ಕನಸು ಭಗ್ನಗೊಳ್ಳಲು ಕಾರಣವಾಗಿದೆ.

 ಈ ಟೂರ್ನಿಯ ಮೂಲಕ ಟ್ವೆಂಟಿ-20 ನಾಯಕತ್ವಕ್ಕೆ ವಿರಾಟ್ ಕೊಹ್ಲಿ ವಿದಾಯ ಹಾಡಿದ್ದಾರೆ. ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಅರುಣ್ ಭರತ್ ಹಾಗೂ ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಅವರ ಪಾಲಿಗೂ ಸೋಮವಾರದ ಪಂದ್ಯ ವಿದಾಯದ ಪಂದ್ಯವಾಗಿತ್ತು.

SCROLL FOR NEXT