ಹಾರ್ದಿಕ್ ಪಾಂಡ್ಯಾ 
ಕ್ರಿಕೆಟ್

5 ಕೋಟಿ ರೂಪಾಯಿ ಮೌಲ್ಯದ ವಾಚ್ ಗಳ ಜಪ್ತಿ: ಹಾರ್ದಿಕ್ ಪಾಂಡ್ಯ ಕಕ್ಕಾಬಿಕ್ಕಿ!

ಭಾನುವಾರ ರಾತ್ರಿ ಎರಡು ದುಬಾರಿ ವಾಚ್‌ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಅವರನ್ನು ತಡೆದಿದ್ದರು.

ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯ ಅವರಿಗೆ ಕಸ್ಟಮ್ಸ್ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಯುಎಇಯಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಿ ಭಾರತಕ್ಕೆ ಮರಳುತ್ತಿರುವ ಪಾಂಡ್ಯ ವಿರುದ್ಧ ಕಸ್ಟಮ್ಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.

ಭಾನುವಾರ ರಾತ್ರಿ ಎರಡು ದುಬಾರಿ ವಾಚ್‌ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಪಾಂಡ್ಯ ಅವರನ್ನು ತಡೆದಿದ್ದರು. ಕೈಗಡಿಯಾರುಗಳು ಹೇಗೆ ಬಂದ್ವು? ಎಲ್ಲಿ ಖರೀದಿ ಮಾಡಿದ್ರಿ? ಇವುಗಳ ಬಿಲ್ ಎಲ್ಲಿ ಅಂತಾ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ.

ಆದ್ರೆ, ಆಲ್ ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಅಧಿಕಾರಿಗಳ ಯಾವ ಪ್ರಶ್ನೆಗೂ ಸಮರ್ಪಕ ಉತ್ತರ ನೀಡಿಲ್ಲ. ಅಲ್ಲದೆ ದುಬಾರಿ ವಾಚ್ ಗಳಿಗೆ ಸಂಬಂಧಿಸಿದಂತೆ ಬಿಲ್‌ನ್ನು ಸಹ ತೋರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಎರಡೂ ವಾಚುಗಳನ್ನು ಜಪ್ತಿ ಮಾಡಿಕೊಂಡಿದೆ. ಎರಡೂ ಕೈಗಡಿಯಾರಗಳ ಬೆಲೆ ಸುಮಾರು 5 ಕೋಟಿ ರೂಪಾಯಿ ಇರಬಹುದು ಎಂದು ಹೇಳಲಾಗುತ್ತಿದೆ.

ಹಾರ್ದಿಕ್ ಪಾಂಡ್ಯ ಭಾನುವಾರ ತಂಡದೊಂದಿಗೆ ಮನೆಗೆ ಮರಳಿದರು. ಆದರೆ ಅವರನ್ನು ಏರ್​ಪೋರ್ಟ್​ನಲ್ಲೇ ತಡೆದ ಕಸ್ಟಮ್ಸ್ ಇಲಾಖೆ ಅವರ ದುಬಾರಿ ವಾಚ್‌ಗಳನ್ನು ಜಪ್ತಿ ಮಾಡಿದೆ ಎಂದು ವರದಿಯಾಗಿದೆ. ಹಾರ್ದಿಕ್ ವಿಶ್ವದ ಅತ್ಯಂತ ದುಬಾರಿ ವಾಚ್‌ಗಳನ್ನು ಹೊಂದಿದ್ದಾರೆ ಮತ್ತು ಅವರ ವಾಚ್ ಸಂಗ್ರಹವು ಪಾಟೆಕ್ ಫಿಲಿಪ್ ನಾಟಿಲಸ್ ಪ್ಲಾಟಿನಂ 5711 ಅನ್ನು ಸಹ ಒಳಗೊಂಡಿದೆ. ಇದರ ಬೆಲೆ ಬರೋಬ್ಬರಿ 5 ಕೋಟಿ ರೂ. ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal flood: ಮೃತರ ಸಂಖ್ಯೆ 270ಕ್ಕೆ ಏರಿಕೆ, ಸುಮಾರು 288 ಭಾರತೀಯರು ನಾಪತ್ತೆ! 800ಕ್ಕೂ ಹೆಚ್ಚು ಜನರ ರಕ್ಷಣೆ