ಸೆಲ್ಯೂಟ್ ಮಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ 
ಕ್ರಿಕೆಟ್

3rd T20I: 95 ಮೀಟರ್ ದೂರದ ಭಾರಿ ಸಿಕ್ಸರ್; ಡ್ರೆಸ್ಸಿಂಗ್ ರೂಮ್ ನಿಂದಲೇ ಸೆಲ್ಯೂಟ್ ಮಾಡಿದ ಕ್ಯಾಪ್ಟನ್ ರೋಹಿತ್ ಶರ್ಮಾ!

ನ್ಯೂಜಿಲೆಂಡ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಅದ್ಭುತ ಆಲ್ ರೌಂಡ್ ಆಟವಾಡಿದ ದೀಪಕ್ ಚಹರ್ ಗೆ ಕ್ಯಾಪ್ಟನ್ ರೋಹಿತ್ ಶರ್ಮಾ ಡ್ರೆಸ್ಸಿಂಗ್ ರೂಮ್ ನಿಂದಲೇ ಸೆಲ್ಯೂಟ್ ಮಾಡುವ ಮೂಲಕ ಗೌರವ ಸೂಚಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಕೊಲ್ಕತಾ: ನ್ಯೂಜಿಲೆಂಡ್ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಅದ್ಭುತ ಆಲ್ ರೌಂಡ್ ಆಟವಾಡಿದ ದೀಪಕ್ ಚಹರ್ (Deepak Chahar) ಗೆ ಕ್ಯಾಪ್ಟನ್ ರೋಹಿತ್ ಶರ್ಮಾ (Rohit Sharma) ಡ್ರೆಸ್ಸಿಂಗ್ ರೂಮ್ ನಿಂದಲೇ ಸೆಲ್ಯೂಟ್ ಮಾಡುವ ಮೂಲಕ ಗೌರವ ಸೂಚಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಹೌದು.. ಈಡನ್ ಗಾರ್ಡನ್ (Eden Gardens) ಮೈದಾನದಲ್ಲಿ ನಿನ್ನೆ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ಅನ್ನು ಭಾರತ ಸೋಲಿಸಿದೆ. ಆ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡುವ ಮೂಲಕ ಐಸಿಸಿ ಟಿ-20 ವರ್ಲ್ಡ್ ಕಪ್ (ICC T20WC) ನಲ್ಲಿನ ಸೋಲಿನ ಸೇಡನ್ನು ಭಾರತ ತೀರಿಸಿಕೊಂಡಿದೆ. 

ಇನ್ನು ಈ ಪಂದ್ಯದಲ್ಲಿ ಸಿಡಿಲಬ್ಬರದ ಹೊಡೆತಗಳಿಂದ ದೀಪಕ್ ಚಹರ್ ಪಂದ್ಯದಲ್ಲಿ ಮಿಂಚಿದರು. ಆಡಮ್ ಮಿಲ್ನೆ ಓವರ್ ನಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ ಚಹರ್ 21 ರನ್ ಬಾರಿಸಿದರು. ಇದೇ ಓವರ್ ನ 4ನೇ ಎಸೆತದಲ್ಲಿ ದೀಪಕ್ 95 ಮೀಟರ್ ಗಳ ದೂರದ ಭಾರಿ ಸಿಕ್ಸರ್ ಹೊಡೆದಾಗ ಡ್ರೆಸ್ಸಿಂಗ್ ರೂಮ್ ನಲ್ಲಿನ ಆಟಗಾರರು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಒಂದು ಹೆಜ್ಜೆ ಮುಂದಿಟ್ಟ ಹಿಟ್ ಮ್ಯಾನ್ ರೋಹಿತ್ ಶರ್ಮಾ, ದೀಪಕ್ ಚಹರ್ ಹೊಡೆತಕ್ಕೆ ಸೆಲ್ಯೂಟ್ ಹೊಡೆದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಮೂರು ಪಂದ್ಯಗಳ ಟಿ-20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಮೂಲಕ 3-0 ಅಂತರದಿಂದ ಬ್ಲ್ಯೂ ಬಾಯ್ಸ್ ಗೆದ್ದುಕೊಂಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT