ಕೆ.ಎಲ್. ರಾಹುಲ್ 
ಕ್ರಿಕೆಟ್

ಕಿವೀಸ್ ವಿರುದ್ಧದ ಮೊದಲ ಟೆಸ್ಟ್: ಕೆಎಲ್ ರಾಹುಲ್ ಹೊರಕ್ಕೆ; ಸೂರ್ಯಕುಮಾರ್ ಯಾದವ್ ತಂಡಕ್ಕೆ ಸೇರ್ಪಡೆ!

ಗಾಯದ ಸಮಸ್ಯೆಯಿಂದಾಗಿ ಗುರುವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಹೊರಗುಳಿಯಲ್ಲಿದ್ದಾರೆ.

ನವದೆಹಲಿ: ಗಾಯದ ಸಮಸ್ಯೆಯಿಂದಾಗಿ ಗುರುವಾರದಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಕೆಎಲ್ ರಾಹುಲ್ ಹೊರಗುಳಿಯಲಿದ್ದು, ಇಂಗ್ಲೆಂಡ್ ಪ್ರವಾಸ ಸಂದರ್ಭದಲ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿದ್ದ ಸೂರ್ಯ ಕುಮಾರ್ ಯಾದವ್  ತಂಡವನ್ನು ಸೇರಿಕೊಳ್ಳಲಿದ್ದಾರೆ. 

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಕೆಎಲ್ ರಾಹುಲ್ ಆಡುತ್ತಿಲ್ಲ ಎಂದು ಬಿಸಿಸಿಐ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ಹೇಳಿವೆ. ಕಾನ್ಫುರದ ಗ್ರೀನ್ ಪಾರ್ಕ್ ಸ್ಡೇಡಿಯಂನಲ್ಲಿ ಇಂದು ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾದ ಎಲ್ಲಾ ಆಟಗಾರರು ಇದ್ದರು. ಆದರೆ, ರಾಹುಲ್ ಕಾಣಿಸಿಕೊಳ್ಳಲಿಲ್ಲ.

ರಾಹುಲ್  ಆಗಿರುವ ಗಾಯದ ಬಗ್ಗೆಸ್ಪಷ್ಟವಾಗಿ ತಿಳಿಯುತ್ತಿಲ್ಲ. ನೆಟ್ ಪ್ರಾಕ್ಟೀಸ್ ನಲ್ಲಿ ಮಾಯಾಂಕ್ ಅಗರ್ ವಾಲ್ ಜೊತೆಯಲ್ಲಿ ಸುಬ್ ಮನ್ ಗಿಲ್ ಬ್ಯಾಟಿಂಗ್ ಮಾಡುತ್ತಿದ್ದ ದೃಶ್ಯ ಕಂಡುಬಂದಿತ್ತು. ಚೇತೇಶ್ವರ ಪೂಜಾರಾ ಕೂಡಾ ಬ್ಯಾಟಿಂಗ್ ಮಾಡುತ್ತಿದ್ದರು. ರಾಹುಲ್ ಅವರ ಗೈರು ಹಿನ್ನೆಲೆಯಲ್ಲಿ ಅವರ ಸ್ಥಾನದಲ್ಲಿ ಯುವ ಆಟಗಾರ ಸೂರ್ಯ ಕುಮಾರ್ ಯಾದವ್ ಅವರನ್ನು ಆಡಲು ಹೇಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ