ಐಪಿಎಲ್ ಟ್ರೋಫಿ 
ಕ್ರಿಕೆಟ್

ಐಪಿಎಲ್‌ 2022 ವೇಳಾ ಪಟ್ಟಿ: ಏಪ್ರಿಲ್ 2ಕ್ಕೆ ಚೆನ್ನೈನಲ್ಲಿ ಮೊದಲ ಪಂದ್ಯ ಸಾಧ್ಯತೆ

ಕ್ರಿಕೆಟ್ ಅಭಿಮಾನಿಗಳಿಗೆ  ಸಂತಸದ ಸುದ್ದಿ. ಐಪಿಎಲ್ 2022ರ ವೇಳಾಪಟ್ಟಿಯನ್ನು ಬಿಸಿಸಿಐ  ಶೀಘ್ರದಲ್ಲೇ   ಪ್ರಕಟಿಸಲಿದ್ದು, ಕ್ರಿಕೆಟ್‌ ಬಜ್ ವರದಿ  ಪ್ರಕಾರ, ಐಪಿಎಲ್ 15 ನೇ  ಸೀಸನ್‌ನ  ವೇಳಾಪಟ್ಟಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆಯಂತೆ.

ಚೆನ್ನೈ: ಕ್ರಿಕೆಟ್ ಅಭಿಮಾನಿಗಳಿಗೆ  ಸಂತಸದ ಸುದ್ದಿ. ಐಪಿಎಲ್ 2022ರ ವೇಳಾಪಟ್ಟಿಯನ್ನು ಬಿಸಿಸಿಐ  ಶೀಘ್ರದಲ್ಲೇ   ಪ್ರಕಟಿಸಲಿದ್ದು, ಕ್ರಿಕೆಟ್‌ ಬಜ್ ವರದಿ ಪ್ರಕಾರ, ಐಪಿಎಲ್ 15 ನೇ ಸೀಸನ್‌ನ  ವೇಳಾಪಟ್ಟಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆಯಂತೆ.

ಏಪ್ರಿಲ್ 2 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ಪ್ರಾರಂಭವಾಗುವ ಸಾಧ್ಯತೆಯಿದ್ದು, ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆಯಂತೆ. ಆದರೆ, ಮುಂದಿನ ವರ್ಷದ ಋತುವಿನಲ್ಲಿ ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ ಲೀಗ್ ಇನ್ನಷ್ಟು ರೋಚಕವಾಗಲಿದೆ.  

ಪ್ರತಿ ಸೀಸನ್‌ ನಲ್ಲಿ ಈವರೆಗೆ 60 ಪಂದ್ಯಗಳು ನಡೆಯುತ್ತಿದ್ದವು. ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ ಪಂದ್ಯಗಳ ಸಂಖ್ಯೆ 74 ಕ್ಕೆ ಹೆಚ್ಚಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಸೀಸನ್ 60 ದಿನಗಳ ಕಾಲ ನಡೆಯಲಿದೆ ಎಂದು ವರದಿ ಹೇಳಿದೆ. ಜೂನ್ 4 ಅಥವಾ ಜೂನ್ 5 ರಂದು ಐಪಿಎಲ್ ಫೈನಲ್ ಪಂದ್ಯ ನಡೆಯುವ ಸಾಧ್ಯತೆ ಇದೆ.

ಏತನ್ಮಧ್ಯೆ, ಚೆನ್ನೈನಲ್ಲಿ ಇತ್ತೀಚಿಗೆ ನಡೆದ 'ದಿ ಚಾಂಪಿಯನ್ಸ್ ಕಾಲ್' ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಸಿಸಿಐ ಕಾರ್ಯದರ್ಶಿ ಜೈ ಶಾ, ಮುಂದಿನ ಸೀಸನ್ ಭಾರತದಲ್ಲಿ ನಡೆಯಲಿದೆ ಎಂದು  ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್