ಕ್ರಿಕೆಟ್

ಹರ್ಭಜನ್ ಸಿಂಗ್ ದಾಖಲೆ ಮುರಿದ ಆರ್ ಅಶ್ವಿನ್, ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ 3ನೇ ಯಶಸ್ವಿ ಬೌಲರ್

Lingaraj Badiger

ಕಾನ್ಪುರ: ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಸೋಮವಾರ ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಮುರಿಯುವ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ.

ಆರ್ ಅಶ್ವಿನ್ ಅವರು ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್​ ಪಂದ್ಯದ 5 ವಿಕೆಟ್ ಪಡೆಯುವ ಮೂಲಕ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಟೀಂ ಇಂಡಿಯಾದ ಮೂರನೇ ಬೌಲರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ದ ಮೊದಲ ಇನಿಂಗ್ಸ್​ನಲ್ಲಿ ಮೂರು ವಿಕೆಟ್ ಪಡೆದಿದ್ದ ಅಶ್ವಿನ್ ಅವರು, ಇದೀಗ 2ನೇ ಇನಿಂಗ್ಸ್​ನಲ್ಲಿ ಎರಡು ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ತಮ್ಮ 80ನೇ ಪಂದ್ಯದಲ್ಲಿ ಒಟ್ಟು 418 ವಿಕೆಟ್​ಗಳನ್ನು ಪಡೆದಿದ್ದಾರೆ. ಈ ಮೂಲಕ 417 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ.

ಈ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ ಅಗ್ರಸ್ಥಾನದಲ್ಲಿದ್ದು, ಕುಂಬ್ಳೆ ಟೆಸ್ಟ್​ ಕ್ರಿಕೆಟ್​ನಲ್ಲಿ 619 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 434 ವಿಕೆಟ್ ಪಡೆದಿರುವ ಕಪಿಲ್ ದೇವ್ 2ನೇ ಸ್ಥಾನದಲ್ಲಿದ್ದಾರೆ. ಇದೀಗ 418 ವಿಕೆಟ್​ ಪಡೆದಿರುವ ಅಶ್ವಿನ್ 3ನೇ ಸ್ಥಾನ ಅಲಂಕರಿಸಿದ್ದಾರೆ. 4ನೇ ಸ್ಥಾನದಲ್ಲಿ ಹರ್ಭಜನ್ ಸಿಂಗ್ ಇದ್ದು, ಭಜ್ಜಿ 417 ವಿಕೆಟ್ ಉರುಳಿಸಿದ್ದಾರೆ.

SCROLL FOR NEXT