ಕೆಕೆಆರ್ ತಂಡದ ಆಟಗಾರರು 
ಕ್ರಿಕೆಟ್

ಐಪಿಎಲ್ 2021: ಸನ್ ರೈಸರ್ಸ್ ವಿರುದ್ಧ ಕೆಕೆಆರ್ ಗೆ ಆರು ವಿಕೆಟ್ ಭರ್ಜರಿ ಜಯ, ಪ್ಲೇ ಆಫ್ ಕನಸು ಜೀವಂತ

ಸಂಘಟಿತ ಆಟದ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಭಾನುವಾರ ನಡೆದ 14ನೇ ಆವೃತ್ತಿ ಐಪಿಎಲ್ ನ 49ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ, ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. 

ದುಬೈ: ಸಂಘಟಿತ ಆಟದ ಪ್ರದರ್ಶನ ನೀಡಿದ ಕೋಲ್ಕತ್ತಾ ನೈಟ್ ರೈಡರ್ಸ್ ಭಾನುವಾರ ನಡೆದ 14ನೇ ಆವೃತ್ತಿ ಐಪಿಎಲ್ ನ 49ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ, ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. 

ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ಗೆ 115 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಕೆಕೆಆರ್ 19.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 119 ರನ್ ಸೇರಿಸಿ ಜಯ ಸಾಧಿಸಿತು. ಅಲ್ಲದೆ 13 ಪಂದ್ಯಗಳಲ್ಲಿ 6 ಜಯ ಸಾಧಿಸಿದ್ದು, 12 ಅಂಕಗಳನ್ನು ಕಲೆ ಹಾಕಿ ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. 

ಆಕರ್ಷಕ ಇನ್ನಿಂಗ್ಸ್ ಕಟ್ಟಿದ ಗಿಲ್ ನಿತೀಶ್ ರಾಣಾ ಜೊತೆಗೆ ಮೂರನೇ ವಿಕೆಟ್ ಗೆ 55 ರನ್ ಗಳನ್ನು ಜೊತೆಯಾಟದಲ್ಲಿ ಭಾಗಿಯಾದರು. 51 ಎಸೆತಗಳನ್ನು ಎದುರಿಸಿದ ಗಿಲ್ 10 ಬೌಂಡರಿಗಳ ನೆರವಿನಿಂದ 57 ರನ್ ಗಳಿಸಿದರು.

ಉಳಿದಂತೆ ದಿನೇಶ್ ಕಾರ್ತಿಕ್ 18, ಏಯಾನ್ ಮಾರ್ಗನ್ 2, ವೆಂಕಟೇಶ್ ಅಯ್ಯರ್ 8, ರಾಹುಲ್ ತ್ರಿಪಾಠಿ 7 ರನ್ ಗಳಿಸಿದರು. ಕೆಕೆಆರ್ ಪರ ಸಾಂಘಿಕ ದಾಳಿ ನಡೆಸಿದ ಟಿಮ್ ಸೌಥಿ, ಶಿವಂ ಮಾವಿ ಹಾಗೂ ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಪಡೆದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT