ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಶಿಖರ್ ಧವನ್ 
ಕ್ರಿಕೆಟ್

ಐಪಿಎಲ್ 2021: ಸಿಎಸ್ ಕೆ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ ಮೂರು ವಿಕೆಟ್ ಅಂತರದ ಜಯ

ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೂರು ವಿಕೆಟ್ ಅಂತರದಿಂದ ಗೆಲುವು ದಾಖಲಿಸಿದೆ. ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ.

ದುಬೈ: ಇಲ್ಲಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೂರು ವಿಕೆಟ್ ಅಂತರದಿಂದ ಗೆಲುವು ದಾಖಲಿಸಿದೆ. ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದೆ.

ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್  ಪರ ಆರಂಭಿಕ ಆಟಗಾರರಾದ ರುತುರಾಜ್ ಗಾಯಕ್ ವಾಡ್ 13, ಫಾಪ್  ಡು ಪ್ಲೆಸಿಸ್  10, ರಾಬಿನ್ ಉತ್ತಪ್ಪ 19, ಮೊಯಿನ್ ಆಲಿ 5, ಅಂಬಟಿ ರಾಯುಡು 55, ನಾಯಕ ಮಹೇಂದ್ರ ಸಿಂಗ್ ಧೋನಿ 18 ಹಾಗೂ ರವೀಂದ್ರ ಜಡೇಜಾ  1 ರನ್ ಕಲೆಹಾಕಿದರು. ಇದರೊಂದಿಗೆ ಸಿಎಸ್ ಕೆ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ  136 ರನ್ ಗಳಿಸಿತು. 

ಈ ಗುರಿಯನ್ನು ಹಿಂಬಾಲಿಸಿದ ಡೆಲ್ಲಿ ಕ್ಯಾಪಿಟಲ್ಸ್  ಆರಂಭಿಕ ಆಟಗಾರ ಪೃಥ್ವಿ ಶಾ 18, ಶಿಖರ್ ಧವನ್ 39, ಶ್ರೇಯಸ್ ಅಯ್ಯರ್ 2, ರಿಷಭ್ ಪಂತ್ 15, ರಿಪಾಲ್ ಪಟೇಲ್ 18, ಆರ್ ಅಶ್ವಿನ್ 2, ಶಿಮ್ರೊನ್ ಹೆಟ್ಮೆಯರ್ ಅಜೇಯ 28, ಅಕ್ಷರ್ ಪಟೇಲ್ 5, ರಾಬಡ ಅಜೇಯ 4 ರನ್  ಕಲೆ ಹಾಕುವುದರೊಂದಿಗೆ  19-4 ಓವರ್ ಗಳಲ್ಲಿ ಏಳು ವಿಕೆಟ್ ಗೆ 139 ರನ್ ಗಳಿಸಿ ಡೆಲ್ಲಿ ಕ್ಯಾಪಿಟಲ್ಸ್  ಗೆಲುವಿನ ನಗೆ ಬೀರಿತು.  ಅಕ್ಷರ್ ಪಟೇಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!