ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಸಂಭ್ರಮದ ಚಿತ್ರ 
ಕ್ರಿಕೆಟ್

ಐಪಿಎಲ್ 2021: ರಾಜಸ್ಥಾನವನ್ನು 8 ವಿಕೆಟ್ ಗಳಿಂದ ಮಣಿಸಿದ ಮುಂಬೈ, ಪ್ಲೇ ಆಫ್ ಆಸೆ ಜೀವಂತ

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ 51ನೇ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಯ 51ನೇ ಪಂದ್ಯದಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡಿದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮಹತ್ವದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್ ಗಳಲ್ಲಿ 9 ವಿಕೆಟ್ ಗೆ 90 ರನ್ ಸೇರಿಸಿತು. ರಾಯಲ್ಸ್ ತಂಡದ ಎವಿನ್ ಲೂಯಿಸ್ 24 ಮತ್ತು ಯಶಸ್ವಿ ಜೈಸ್ವಾಲ್ 12 ರನ್ ಗಳಿಂದ ಉತ್ತಮ ಆರಂಭ ನೀಡುವ ಪ್ರಯತ್ನದಲ್ಲಿದ್ದರು. ಆದರೆ, ಕೌಲ್ಟರ್ ನೈಲ್ ಅದಕ್ಕೆ ಆಸ್ಪದ ನೀಡಲಿಲ್ಲ. ನಾಲ್ಕನೇ ಓವರ್ ನಲ್ಲಿ ಜೈಸ್ವಾಲ್ ವಿಕೆಟ್ ಪಡೆದರು. ನಂತರದ 63 ರನ್ ಗಳ ಅಂತರದಲ್ಲಿ ಎಂಟು ವಿಕೆಟ್ ಗಳು ಪತನವಾದವು. 

ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ನಾಯಕ ರೋಹಿತ್ ಶ್ರಮಾ 22, ಇಶಾನ್ ಕಿಶಾನ್ 50 ಹಾಗೂ ಸೂರ್ಯ ಕುಮಾರ್ 13 ರನ್ ಗಳಿಸುವುದರೊಂದಿಗೆ  8.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 94 ರನ್ ಸೇರಿಸಿ ಸುಲಭ ಜಯ ಸಾಧಿಸಿತು. ಕೌಲ್ಟರ್ ನೈಲ್  ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel