ಕೆಕೆಆರ್ ಆಟಗಾರರು 
ಕ್ರಿಕೆಟ್

ಐಪಿಎಲ್ 2021: ರಾಜಸ್ಥಾನ ರಾಯಲ್ಸ್ ತಂಡವನ್ನು 86 ರನ್ ಗಳಿಂದ ಮಣಿಸಿದ ಕೆಕೆಆರ್

ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ  ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 86 ರನ್ ಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಣಿಸಿದೆ.

ಶಾರ್ಜಾ: ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ  ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು 86 ರನ್ ಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಮಣಿಸಿದೆ.

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 171 ಬೃಹತ್ ಮೊತ್ತ ಪೇರಿಸಿತು. ಕೆಕೆಆರ್ ಪರ ಶುಭ್ ಮನ್ ಗಿಲ್ 56, ವೆಂಕಟೇಶ್ ಅಯ್ಯರ್ 38, ರಾಹುಲ್ ತ್ರಿಪಾಠಿ 21 ರನ್ ಗಳಿಸಿದರು.  ರಾಜಸ್ಥಾನ ರಾಯಲ್ಸ್ ಪರ ರಾಹುಲ್ ತೇವಾಟಿಯಾ, ಗ್ಲೇನ್ ಫಿಲಿಪ್ಸ್ ಮತ್ತು ಚೇತನ್ ಸಕಾರಿಯಾ ತಲಾ ಒಂದೊಂದು ವಿಕೆಟ್ ಪಡೆದರು.

ಕೆಕೆಆರ್ ನೀಡಿದ ಬೃಹತ್ ರನ್ ಗಳ ಗುರಿ ಬೆನ್ನತ್ತಿದ್ದ ರಾಜಸ್ಥಾನ ರಾಯಲ್ಸ್ ತಂಡ 16.1 ಓವರ್ ಗಳಿಗೆ ಆಲೌಟ್ ಆಗುವುದರೊಂದಿಗೆ ಕೇವಲ 85 ರನ್ ಗಳಿಸಲಷ್ಟೇ ಶಕ್ತವಾಯಿತು. ಕೆಕೆಆರ್ ಪರ ಬೌಲರ್ ಶಿವಂ ಮಾವಿ 4, ಲಾಕಿ ಫರ್ಗುಸನ್ 3, ಶಾಹಿೂ್ ಅಲ್ ಹಸನ್ 1 ವಿಕೆಟ್ ಪಡೆದರು. ಶಿವಂ ಮಾವಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನವಾರದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel