ಸಾನಿಯಾ ಮಿರ್ಜಾ 
ಕ್ರಿಕೆಟ್

ಟಿ20 ವಿಶ್ವಕಪ್: ಭಾರತ-ಪಾಕ್‌ ಹೈವೋಲ್ಟೇಜ್ ಪಂದ್ಯದಂದೆ ದಿಟ್ಟ ನಿರ್ಧಾರ ಕೈಗೊಳ್ಳಲಿರುವ ಪಾಕ್ ಸೊಸೆ ಸಾನಿಯಾ!

ಟಿ20 ವಿಶ್ವಕಪ್ ಭಾಗವಾಗಿ ಟೀಂ ಇಂಡಿಯಾ-ಪಾಕಿಸ್ತಾನ ತಂಡಗಳ ನಡುವೆ ಈ ತಿಂಗಳ 24ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ, ಪಾಕಿಸ್ತಾನದ ಸೊಸೆ ಸಾನಿಯಾ ಮಿರ್ಜಾ ಇನ್ಸ್ಟಾಗ್ರಾಮ್ ವೇದಿಕೆಯಲ್ಲಿ ಆಸಕ್ತಿದಾಯಕ ಪೋಸ್ಟ್ ಮಾಡಿದ್ದಾರೆ.

ಹೈದರಾಬಾದ್: ಟಿ20 ವಿಶ್ವಕಪ್ ಭಾಗವಾಗಿ ಟೀಂ ಇಂಡಿಯಾ-ಪಾಕಿಸ್ತಾನ ತಂಡಗಳ ನಡುವೆ ಈ ತಿಂಗಳ 24ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಟೆನಿಸ್ ಆಟಗಾರ್ತಿ, ಪಾಕಿಸ್ತಾನದ  ಸೊಸೆ ಸಾನಿಯಾ ಮಿರ್ಜಾ ಇನ್ಸ್ಟಾಗ್ರಾಮ್ ವೇದಿಕೆಯಲ್ಲಿ ಆಸಕ್ತಿದಾಯಕ ಪೋಸ್ಟ್ ಮಾಡಿದ್ದಾರೆ.

ಪಂದ್ಯದ ಸಮಯದಲ್ಲಿ ಎರಡು ದೇಶಗಳ ಕ್ರಿಕೆಟ್‌ ಅಭಿಮಾನಿಗಳಿಂದ ಎದುರಾಗಬಹುದಾದ ಮುಜುಗರ ಪರಿಸ್ಥಿತಿಯಿಂದ ಪಾರಾಗಲು ಅಂದು ತಾವು ಸಾಮಾಜಿಕ ಮಾಧ್ಯಮದಿಂದ ದೂರವಿರಲು ನಿರ್ಧರಿಸಿರುವುದಾಗಿ ಅವರು ಹೇಳಿದ್ದಾರೆ.

ಸಾಂಪ್ರದಾಯಿಕ ಎದುರಾಳಿಗಳ ನಡುವೆ ಪಂದ್ಯ ನಡೆಯುವ ಸಮಯದಲ್ಲಿ ಎರಡೂ ದೇಶಗಳ ಅಭಿಮಾನಿಗಳು ಉತ್ಸಾಹ, ಉದ್ವೇಗಗಳಿಗೆ ಒಳಗಾಗುತ್ತಾರೆ. ಹಾಗಾಗಿ ತಾವು ಆ ದಿನ ಸಾಮಾಜಿಕ ಮಾಧ್ಯಮಗಳಿಂದ "ಮಾಯ"ವಾಗುವುದಾಗಿ ಇನ್ಸ್ಟಾಗ್ರಾಮ್‌ ನಲ್ಲಿ ವೀಡಿಯೊ ಸಂದೇಶ ಹಂಚಿಕೊಂಡಿದ್ದಾರೆ.

ಈ ಹಿಂದೆ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಎರಡೂ  ದೇಶಗಳ ಅಭಿಮಾನಿಗಳು ತಮ್ಮನ್ನು ವ್ಯಾಪಕವಾಗಿ ಟ್ರೋಲ್ ಮಾಡಿದ ಹಿನ್ನೆಲೆಯಲ್ಲಿ ಸಾನಿಯಾ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ನೆಟಿಜನ್‌ಗಳು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಸಾನಿಯಾ ಪತಿ ಶೋಯೆಬ್ ಮಲಿಕ್ ಪಾಕಿಸ್ತಾನ ತಂಡದ ಪ್ರಮುಖ ಸದಸ್ಯರಾಗಿ ಮುಂದುವರಿದಿದ್ದಾರೆ. ಮತ್ತೊಂದೆಡೆ ಪಾಕಿಸ್ತಾನ ಈವರೆಗೆ ವಿಶ್ವಕಪ್ ಪಂದ್ಯದಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಸುಪ್ರೀಂಕೋರ್ಟ್​ಗೆ ನನ್ನ ಬಗ್ಗೆ ತಪ್ಪು ಮಾಹಿತಿ: ಸರ್ಕಾರದ ವಿರುದ್ಧ ಡಿಜಿಪಿ ಅಲೋಕ್ ಕುಮಾರ್ ಅಸಮಾಧಾನ!

ಯುವ ಜನತೆಯ ಆಕ್ರೋಶ ತಡೆಯಲು ಸಾಧ್ಯವಿಲ್ಲ, ಇಡೀ ದೇಶ ಜಂತರ್ ಮಂತರ್ ಆಗಲಿದೆ: ಪ್ರಕಾಶ್ ರಾಜ್

ಸೆಪ್ಟೆಂಬರ್‌ನಲ್ಲಿ ನಿರೀಕ್ಷೆ ಮೀರಿ ಹೆಚ್ಚಿದ ಭಾರತದ ಸಗಟು ಹಣದುಬ್ಬರ: ಶೇ.11.4ಕ್ಕೆ ಏರಿಕೆ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!