ಮೊಹಮ್ಮದ್ ಶಮಿ 
ಕ್ರಿಕೆಟ್

ನೆಟ್ಟಿಗರಿಂದ ಅವಾಚ್ಯ ಶಬ್ದಗಳಿಂದ ನಿಂದನೆ: ವೇಗಿ ಮೊಹಮ್ಮದ್ ಬೆಂಬಲಕ್ಕೆ ನಿಂತ ಕ್ರಿಕೆಟಿಗರು

ಆನ್ ಲೈನ್ ನಲ್ಲಿ ನೆಟ್ಟಿಗರಿಂದ ಅವಾಚ್ಯ ಶಬ್ದಗಳಿಂದ ನಿಂದನೆಗೆ ಒಳಗಾದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮಾಜಿ ಆಟಗಾರರಾದ ವಿರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್ ಸೇರಿದಂತೆ ಹಲವು ಹಾಲಿ ಹಾಗೂ ಮಾಜಿ ಆಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಪಾಕಿಸ್ತಾನ ಎದುರು ಭಾರತ ಸೋಲಿಗೆ ಶರಣಾದ ನಂತರ ಆನ್ ಲೈನ್ ನಲ್ಲಿ ನೆಟ್ಟಿಗರಿಂದ ಅವಾಚ್ಯ ಶಬ್ದಗಳಿಂದ ನಿಂದನೆಗೆ ಒಳಗಾದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಮಾಜಿ ಆಟಗಾರರಾದ ವಿರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್ ಸೇರಿದಂತೆ ಹಲವು ಹಾಲಿ ಹಾಗೂ ಮಾಜಿ ಆಟಗಾರರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಭಾನುವಾರ ನಡೆದ ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಮೊಹಮ್ಮದ್ ಶಮಿ 3.5 ಓವರ್ ಗಳಲ್ಲಿ 43 ರನ್ ನೀಡುವ ಮೂಲಕ ಟೀಂ ಇಂಡಿಯಾ ಪಾಲಿಗೆ ದುಬಾರಿಯಾಗಿ ಪರಿಣಮಿಸಿದರು. ಇದರಿಂದಾಗಿ ಟಿ-20 ವಿಶ್ವಕಪ್ ನಲ್ಲಿ ಭಾರತ 10 ವಿಕೆಟ್ ಗಳಿಂದ ಸೋಲಿಗೆ ಶರಣಾಗಿತ್ತು.

ಮೊಹಮ್ಮದ್ ಶಮಿ ಕುರಿತು ಆನ್ ಲೈನ್ ನಲ್ಲಿ ನಿಂದನೆ ಆಘಾತಕಾರಿಯಾಗಿದ್ದು, ಅವರ ಬೆಂಬಲಕ್ಕೆ ನಾವಿದ್ದೇವೆ. ಅವರೊಬ್ಬ ಚಾಂಪಿಯನ್ ಆಟಗಾರನಾಗಿದ್ದು, ಭಾರತದ ಕ್ಯಾಪ್ ಧರಿಸುವ ಪ್ರತಿಯೊಬ್ಬ ಆಟಗಾರನೂ ನೆಟ್ಟಿಗರಿಗಿಂತ ಹೆಚ್ಚು ಭಾರತದ ಅಭಿಮಾನವನ್ನು ಹೊಂದಿದ್ದಾರೆ. ನಾವು ನಿಮ್ಮೊಂದಿಗೆ ಇದ್ದೇವೆ. ಮುಂದಿನ ಪಂದ್ಯದಲ್ಲಿ ಸಾಬೀತುಪಡಿಸಿ ಎಂದು ವಿರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ.

ಹರ್ಭಜನ್ ಸಿಂಗ್, ಮಾಜಿ ವೇಗಿ ಆರ್. ಪಿ. ಸಿಂಗ್, ಹಾಲಿ ಲೆಗ್ ಸ್ಪಿನ್ನರ್ ಯುಜುವೇಂದ್ರ ಚಾಹಲ್ ಮತ್ತಿತರರು ಮೊಹಮ್ಮದ್ ಶಮಿ ಪರ ಬೆಂಬಲ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'ಬಿಜೆಪಿಗೆ ಖುಷಿ ಕೊಡುವ ಹೇಳಿಕೆ ನೀಡಬೇಡಿ': Rahul Gandhi ಕುರಿತ ಕಾಂಗ್ರೆಸ್ ಸಂಸದ ಶಶಿತರೂರ್ ಹೇಳಿಕೆಗೆ KC ವೇಣುಗೋಪಾಲ್ ಖಡಕ್ ವಾರ್ನಿಂಗ್

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!