ಸಂಗ್ರಹ ಚಿತ್ರ 
ಕ್ರಿಕೆಟ್

T20 WC: ವೆಸ್ಟ್ ಇಂಡೀಸ್ ವಿರುದ್ದ ಗೆದ್ದ ದಕ್ಷಿಣ ಆಫ್ರಿಕಾ, ಸತತ 2 ಪಂದ್ಯ ಸೋತ ವಿಂಡೀಸ್ ಪಡೆ!

ಟಿ20 ವಿಶ್ವಕಪ್ ಟೂರ್ನಿಯ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 8 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ದುಬೈ: ಟಿ20 ವಿಶ್ವಕಪ್ ಟೂರ್ನಿಯ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 8 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ. 

ದುಬೈನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ತಂಡ 8 ವಿಕೆಟ್ ನಷ್ಟಕ್ಕೆ 143 ರನ್ ಪೇರಿಸಿತ್ತು. ವಿಂಡೀಸ್ ನೀಡಿದ ಸಾಧಾರಣ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಇನ್ನು 10 ಎಸೆತ ಬಾಕಿ ಇರುವಂತೆ 2 ವಿಕೆಟ್ ನಷ್ಟಕ್ಕೆ 144 ರನ್ ಬಾರಿಸಿ ಗೆಲುವಿನ ನಗೆ ಬೀರಿತು.

ವಿಂಡೀಸ್ ಪರ ಸಿಮೋನ್ಸ್ 16, ಇವಿನ್ ಲೇವಿಸ್ 56, ನಿಕೋಲಸ್ ಪೂರನ್ 12, ಕ್ರಿಸ್ ಗೇಯ್ಲ್ 12 ಮತ್ತು ಕೀರನ್ ಪೊಲಾರ್ಡ್ 26 ರನ್ ಬಾರಿಸಿದ್ದಾರೆ. 

ಆಫ್ರಿಕಾ ಪರ ಬೌಲಿಂಗ್ ಡ್ವೈನ್ ಪ್ರಿಟೋರಿಯಸ್ 3, ಕೇಶವ್ ಮಹಾರಾಜ್ 2 ವಿಕೆಟ್ ಪಡೆದಿದ್ದಾರೆ. 

ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್ ನಲ್ಲಿ ರೀಜಾ ಹೆಂಡ್ರಿಕ್ಸ್ 39, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ ಅಜೇಯ 43 ಮತ್ತು ಐಡೆನ್ ಮಾರ್ಕ್ರಾಮ್ ಅಜೇಯ 51 ರನ್ ಸಿಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತೆಮ್ ನವಿ ಪಿಳ್ಳೆಗೆ ಒಲಿದ ನೊಬೆಲ್ ಶಾಂತಿ ಗರಿ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video

'ಪೋಷಕರು ನನ್ನ ಆ ಖಾಸಗಿ ವಿಡಿಯೋ ನೋಡಿದ್ದರು, ಏರ್‌ಪೋರ್ಟ್‌ನಲ್ಲೇ ಕುಳಿತು ಅತ್ತಿದ್ದೆ: ವೈರಲ್‌ ಪಾರ್ಟಿ ಬಗ್ಗೆ ಅಪೂರ್ವ ಮುಖಿಜಾ! Video

ಪ್ರಜ್ವಲ್​​ ರೇವಣ್ಣಗೆ ಬಿಗ್ ಶಾಕ್; ಪರಪ್ಪನ ಅಗ್ರಹಾರದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಮಾಜಿ ಸಂಸದನ ಶಿಫ್ಟ್!