ಆಫ್ಘಾನಿಸ್ತಾನಕ್ಕೆ ಗೆಲುವು 
ಕ್ರಿಕೆಟ್

ಟಿ20 ವಿಶ್ವಕಪ್: ನಮೀಬಿಯಾ ವಿರುದ್ಧ ಆಫ್ಘಾನಿಸ್ತಾನಕ್ಕೆ 62ರನ್ ಗಳ ಭರ್ಜರಿ ಜಯ

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ನಮೀಬಿಯಾ ವಿರುದ್ಧ 62 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡ ನಮೀಬಿಯಾ ವಿರುದ್ಧ 62 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಭಾನುವಾರ ನಡೆದ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ನಮೀಬಿಯಾ ವಿರುದ್ಧ ಅಫ್ಗಾನಿಸ್ತಾನ 62 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.  ಈ ಮೂಲಕ ವಿದಾಯದ ಪಂದ್ಯ ಆಡಿದ ಮಾಜಿ ನಾಯಕ ಅಸ್ಗರ್ ಅಫ್ಗನ್‌ಗೆ ವಿಜಯದ ಬೀಳ್ಕೊಡುಗೆಯನ್ನು ಸಲ್ಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಆಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 160ರನ್ ಗಳಿಸಿತು. ಈ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ನಮೀಬಿಯಾ ತಂಡ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 98ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಆ ಮೂಲಕ 62 ರನ್ ಗಳ ಅಂತರದಲ್ಲಿ ಭರ್ಜರಿ ಸಾಧಿಸಿದೆ.

ಇದರೊಂದಿಗೆ ಆಫ್ಘಾನಿಸ್ತಾನ ತಾನಾಡಿದ ಮೂರು ಪಂದ್ಯಗಳಲ್ಲಿ ಎರಡನೇ ಗೆಲುವಿನೊಂದಿಗೆ ನಾಲ್ಕು ಅಂಕ ಸಂಪಾದಿಸಿದ್ದು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಅತ್ತ ಸ್ಕಾಟ್ಲೆಂಡ್ ವಿರುದ್ಧ ಗೆಲುವಿನ ಶುಭಾರಂಭ ಮಾಡಿದ್ದ ನಮೀಬಿಯಾ ಸೂಪರ್-12 ಹಂತದಲ್ಲಿ ಮೊದಲ ಸೋಲಿಗೆ ಶರಣಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT