ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಆಸ್ಟ್ರೇಲಿಯಾ ಜೊತೆ ಐತಿಹಾಸಿಕ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ತಾಲಿಬಾನ್ ಗ್ರೀನ್ ಸಿಗ್ನಲ್

ತಾಲಿಬಾನಿಗಳು ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನ ಕ್ರಿಕೆಟ್ ಭವಿಷ್ಯದ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ತಾಲಿಬಾನ್ ವಕ್ತಾರ ಅಹ್ಮದುಲ್ಲಾ ವಸೀಕ್ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ತಾಲಿಬಾನಿಗಳು
Vishwanath S
Updated On : 1 Sept 2021, 7:50 pm

ಕಾಬೂಲ್: ತಾಲಿಬಾನಿಗಳು ವಶಪಡಿಸಿಕೊಂಡ ನಂತರ ಅಫ್ಘಾನಿಸ್ತಾನ ಕ್ರಿಕೆಟ್ ಭವಿಷ್ಯದ ಅನಿಶ್ಚಿತತೆಯ ಹಿನ್ನೆಲೆಯಲ್ಲಿ ತಾಲಿಬಾನ್ ವಕ್ತಾರ ಅಹ್ಮದುಲ್ಲಾ ವಸೀಕ್ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 

ಅಫ್ಘಾನ್ ಕ್ರಿಕೆಟ್ ವ್ಯವಹಾರಗಳಲ್ಲಿ ತಾಲಿಬಾನಿಗಳು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟ ಭರವಸೆ ನೀಡಿದ್ದಾರೆ. ಅಂತಾರಾಷ್ಟ್ರೀಯ ವೇಳಾಪಟ್ಟಿಯಂತೆ ಪಂದ್ಯಗಳನ್ನು ಎಂದಿನಂತೆ ಆಡಬಹುದು. ತಮ್ಮಿಂದ ಯಾವುದೇ ಅಭ್ಯಂತರವಿಲ್ಲ ಎಂದು   ಖಾತರಿ ನೀಡಿದ್ದಾರೆ.   

ನಮಗೆ ವಿಶ್ವದ ರಾಷ್ಟ್ರಗಳೊಂದಿಗೆ ಉತ್ತಮ ಸಂಬಂಧ ಮುಖ್ಯವಾಗಿದೆ. ತಮ್ಮ ರಾಷ್ಟ್ರೀಯ ಕ್ರಿಕೆಟ್ ತಂಡ ವಿದೇಶಿ ಪ್ರವಾಸಕ್ಕೆ ತೆರಳಿದರೂ, ವಿದೇಶಿ ತಂಡಗಳು ತಮ್ಮ ದೇಶಕ್ಕೆ ಬಂದರೂ ಯಾವುದೇ ಅಭ್ಯಂತರ ಅಡೆ ತಡೆಗಳು ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Advertisement

Advertisement

ವೇಳಾಪಟ್ಟಿಯಂತೆ ನವೆಂಬರ್‌ನಲ್ಲಿ ನಡೆಯಬೇಕಿರುವ ಆಸೀಸ್ ಪ್ರವಾಸ ಎಂದಿನಂತೆ ಮುಂದುವರಿಯಲಿದೆ ಎಂದು ಭರವಸೆ ನೀಡಿದ್ದಾರೆ. ಈ ಪ್ರವಾಸದಲ್ಲಿ ಅಫ್ಘಾನ್ ತಂಡ ನವೆಂಬರ್ 27ರಂದು ಆಸೀಸ್‌ ಎದುರು ಏಕೈಕ ಟೆಸ್ಟ್ ಪಂದ್ಯ ಆಡಲಿದೆ. ಹೋಬಾರ್ಟ್ ನಲ್ಲಿ ನಡೆಯಲಿರುವ ಈ  ಐತಿಹಾಸಿಕ ಪಂದ್ಯವನ್ನು ಆಯೋಜಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ(ಸಿಎ) ಪ್ರಕಟಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments