ಟೀಂ ಇಂಡಿಯಾ 
ಕ್ರಿಕೆಟ್

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರ ಟೀಂ ಇಂಡಿಯಾ ತಂಡ ಪ್ರಕಟ!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರ ಟೀಂ ಇಂಡಿಯಾ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರ ಟೀಂ ಇಂಡಿಯಾ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. 

ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ(ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್, ಮೊಹ್ಮದ್ ಶಮಿ

ಹೆಚ್ಚುವರಿ ಆಟಗಾರರಾಗಿ ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್ ರನ್ನು ಆಯ್ಕೆ ಮಾಡಲಾಗಿದೆ. 

ಟಿ20 ವಿಶ್ವಕಪ್ ಟೂರ್ನಿಗೆ ಅಕ್ಟೋಬರ್ 17 ರಂದು ಚಾಲನೆ ಸಿಗಲಿದ್ದು, ನವೆಂಬರ್ 14ರಂದು ಫೈನಲ್ ಪಂದ್ಯ ನಡೆಯಲಿದೆ.

ಅಕ್ಟೋಬರ್ 17 ಮೊದಲ ರೌಂಡ್ ಪಂದ್ಯ ಒಮನ್ ಮತ್ತು ಪಿಎನ್​ಜಿ ನಡುವೆ ನಡೆಯಲಿದ್ದು, ಸಾಕಷ್ಟು ರೋಚಕತೆ ಸೃಷ್ಟಿಸಲಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯ ಅಕ್ಟೋಬರ್ 24 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಟೂರ್ನಿಯ ಮೊದಲ ಸೂಪರ್ 12 ಪಂದ್ಯ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅ. 23ಕ್ಕೆ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!