ಜಸ್‌ಪ್ರೀತ್‌ ಬುಮ್ರಾ 
ಕ್ರಿಕೆಟ್

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌‌: ಶಾರ್ದೂಲ್, ಬುಮ್ರಾ ಜಿಗಿತ

ಓವಲ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಓಲಿ ಪೋಪ್ ಮತ್ತು ಭಾರತದ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಅವರು ಉತ್ತಮ ಪ್ರದರ್ಶನ ನೀಡಿದ್ದರ ಪರಿಣಾಮ...

ದುಬೈ: ಓವಲ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಓಲಿ ಪೋಪ್ ಮತ್ತು ಭಾರತದ ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಅವರು ಉತ್ತಮ ಪ್ರದರ್ಶನ ನೀಡಿದ್ದರ ಪರಿಣಾಮ ಬುಧವಾರ ಬಿಡುಗಡೆಯಾದ ಪುರುಷರ ಟೆಸ್ಟ್ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ.

ಪೋಪ್ ಜಹಾನ್ ಮೊದಲ ಇನ್ನಿಂಗ್ಸ್‌ನಲ್ಲಿ 82 ರನ್ ಗಳಿಸಿ ಒಂಬತ್ತು ಸ್ಥಾನ ಜಿಗಿತ ಕಂಡಿದ್ದು,  49ನೇ ಸ್ಥಾನದಲ್ಲಿದ್ದಾರೆ. 
ಇನ್ನೂ ಶಾರ್ದೂಲ್ ಎರಡೂ ಇನ್ನಿಂಗ್ಸ್‌ಗಳಲ್ಲಿ ಅರ್ಧ ಶತಕಗಳೊಂದಿಗೆ 59 ಸ್ಥಾನ ಜಿಗಿದು 79ನೇ ಸ್ಥಾನದಲ್ಲಿದ್ದಾರೆ. 29 ವರ್ಷದ ಅವರು ಬೌಲಿಂಗ್ ಶ್ರೇಯಾಂಕದಲ್ಲಿ ಏಳು ಸ್ಥಾನಗಳನ್ನು ಏರಿಕೆ ಕಂಡಿದ್ದಾರೆ. ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದ ನಂತರ, ಬೌಲರ್‌ಗಳ ಪಟ್ಟಿಯಲ್ಲಿ 49ನೇ ಸ್ಥಾನ ತಲುಪಿದ್ದಾರೆ.

ಭಾರತೀಯ ಆರಂಭಿಕ ಆಟಗಾರ ರೋಹಿತ್ ಶರ್ಮಾ ತನ್ನ ಐದನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ, ಎರಡನೇ ಇನ್ನಿಂಗ್ಸ್‌ನಲ್ಲಿ 127 ರನ್ ಗಳಿಸಿದ ನಂತರ ಆರನೇ ಶ್ರೇಯಾಂಕದ ನಾಯಕ ವಿರಾಟ್ ಕೊಹ್ಲಿಗಿಂತ 30 ಅಂಕ ಹೆಚ್ಚಾಗಿದೆ. ಮತ್ತೊಂದೆಡೆ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದ ಕಾರಣ ಬೌಲರ್‌ಗಳ ಪಟ್ಟಿಯಲ್ಲಿ 10 ರಿಂದ 9ನೇ ಸ್ಥಾನಕ್ಕೆ ಏರಿದ್ದಾರೆ.

ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ವೇಗಿ ಬೂಮ್ರಾ ಎದುರಾಳಿ ತಂಡದ ಒಲಿ ಪೋಪ್‌ ಮತ್ತು ಜಾನಿ ಬೇಸ್ಟೊ ಅವರನ್ನು ಬೌಲ್ಡ್ ಮಾಡಿದ್ದರು. ಭಾರತ ಪಂದ್ಯವನ್ನು 157 ರನ್‌ಗಳಿಂದ ಗೆದ್ದುಕೊಂಡಿತ್ತು.

ಬೌಲರ್‌ಗಳ ಪೈಕಿ ಅಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅಗ್ರಸ್ಥಾನದಲ್ಲಿದ್ದು, ಭಾರತದ ಆರ್‌. ಅಶ್ವಿನ್ ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಅಶ್ವಿನ್‌ ಅವರು ಒಂದು ಸ್ಥಾನ ಕುಸಿತ ಕಂಡು ಐದನೇ ಸ್ಥಾನದಲ್ಲಿದ್ದಾರೆ. ಜಡೇಜ ಮೂರನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT