ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ 
ಕ್ರಿಕೆಟ್

2021 ವಿಶ್ವಕಪ್ ನಂತರ ಟಿ-20 ತಂಡದ ನಾಯಕತ್ವ ತ್ಯಜಿಸಲಿದ್ದಾರೆ ವಿರಾಟ್ ಕೊಹ್ಲಿ!

ಯುಎಇಯಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ ಭಾರತದ ಟಿ-20 ನಾಯಕನ ಸ್ಥಾನ ತ್ಯಜಿಸುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಗುರುವಾರ ಘೋಷಿಸಿದ್ದಾರೆ.

ದುಬೈ: ಯುಎಇಯಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ನಂತರ ಭಾರತದ ಟಿ-20 ನಾಯಕನ ಸ್ಥಾನ ತ್ಯಜಿಸುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಗುರುವಾರ ಘೋಷಿಸಿದ್ದಾರೆ. ಆದರೆ ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. 

ವಿರಾಟ್ ಕೊಹ್ಲಿ ಅವರ ಈ ನಿರ್ಧಾರ ರೋಹಿತ್ ಶರ್ಮಾ ಅವರು ಟಿ-20 ತಂಡದ ನಾಯಕರಾಗಲು ದಾರಿ ಮಾಡಿಕೊಡಲಿದೆ.

"ಅಕ್ಟೋಬರ್‌ನಲ್ಲಿ ದುಬೈನಲ್ಲಿ ನಡೆಯಲಿರುವ ಈ ಟಿ- 20 ವಿಶ್ವಕಪ್ ನಂತರ ನಾನು ಟಿ 20 ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ" ಎಂದು 32 ವರ್ಷದ ಕೊಹ್ಲಿ ಅವರು ಟ್ವೀಟ್ ಮಾಡಿದ್ದಾರೆ.

ನನಗೆ ಭಾರತವನ್ನು ಪ್ರತಿನಿಧಿಸುವ ಅವಕಾಶ ಅಲ್ಲದೇ ತಂಡ ಮುನ್ನಡೆಸುವ ಭಾಗ್ಯವೂ ಸಿಕ್ಕಿತ್ತು.  ನಾನು ಎಲ್ಲರಿಗೂ ಧನ್ಯವಾದ ಹೇಳುತ್ತಿದ್ದೇನೆ. ಉಳಿದ ಆಟಗಾರರ ನೆರವು ಇಲ್ಲದಿದ್ದರೆ ಏನು ಮಾಡಲಾಗುತ್ತಿರಲಿಲ್ಲ. ಸಹ ಆಟಗಾರರು, ಸಪೋರ್ಟ್ ಸ್ಟಾಫ್, ಆಯ್ಕೆ ಮಂಡಳಿ ಎಲ್ಲರಿಗೂ ಮತ್ತೊಮ್ಮೆ ಧನ್ಯವಾದ ಅರ್ಪಿಸುತ್ತಿದ್ದೇನೆ ಎಂದಿದ್ದಾರೆ.

ಕಳದೆ ಐದಾರು ವರ್ಷದಿಂದ ಎಲ್ಲ ಮೂರು ಮಾದರಿಯಲ್ಲಿ ಟೀಂ ಇಂಡಿಯಾ ಮುನ್ನಡೆಸಿಕೊಂಡುಬಂದಿದ್ದೇನೆ. ನಾನು ಏಕದಿನ ಮತ್ತು ಟೆಸ್ಟ್ ತಂಡ ಮುನ್ನಡೆಸಲು ಸದಾ ಸಿದ್ಧನಾಗಿಯೇ ಇದ್ದೇನೆ. ಇನ್ನು ಮುಂದೆ ಟಿ20 ಯಲ್ಲಿ ಒಬ್ಬ ಬ್ಯಾಟ್ಸ್ ಮನ್ ಆಗಿ ಇರಲು ಬಯಸಿದ್ದೇನೆ ಎಂದು ಕೊಹ್ಲಿ ಹೇಳಿದ್ದಾರೆ.

ಈ ನಿರ್ಧಾರಕ್ಕೆ ಬರಲು ಸಾಕಷ್ಟು ಸಮಯ ತೆಗೆದುಕೊಂಡಿದ್ದೇನೆ. ನನ್ನ ಹತ್ತಿರದ ಜನರ ಜತೆ ಚರ್ಚೆ ಮಾಡಿದ್ದೇನೆ. ರವಿ ಶಾಸ್ತ್ರಿ ಮತ್ತು ರೋಹಿತ್ ಶರ್ಮಾ ಬಳಿಯೂ ಮಾತನಾಡಿದ್ದೇನೆ. ದುಬೈನಲ್ಲಿ ನಡೆಯಲಿರುವ ಟಿ- 20 ವಿಶ್ವಕಪ್ ನಂತರ ಟಿ- 20 ನಾಯಕತ್ವದಿಂದ ನಿರ್ಗಮಿಸಲಿದ್ದೇನೆ. ಕಾರ್ಯದರ್ಶಿ ಜೈಶಾ ಜತೆಗೂ ಮಾತನಾಡಿದ್ದೇನೆ. ಬಿಸಿಸಿಐ ಅಧ್ಯಕ್ಷ ದೌರವ್ ಗಂಗೂಲಿ ಜತೆಗೂ ಮಾತನಾಡಿದ್ದೇನೆ. ಇನ್ನು ಮುಂದೆಯೂ ನಾನು ಭಾರತದ ಪರವಾಗಿ ಆಡಲಿದ್ದೇನೆ ಎಂದು ಅಭಿಮಾನಿಗಳಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

2017 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಂತರ ವಿರಾಟ್ ಕೊಹ್ಲಿ ಭಾರತದ ಸೀಮಿತ ಓವರ್‌ಗಳ ತಂಡದ ನಾಯಕತ್ವ ವಹಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

SCROLL FOR NEXT