ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ ಜಯ 
ಕ್ರಿಕೆಟ್

ಐಪಿಎಲ್-2021: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 8 ವಿಕೆಟ್ ಗಳ ಭರ್ಜರಿ ಜಯ

ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಅಬುದಾಬಿ: ಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಸನ್ ರೈಸರ್ಸ್ ಹೈದರಾಬಾದ್ ತಂಡ ನೀಡಿಗ 135 ರನ್ ಗಳ ಸಾಧಾರಣ ಗುರಿಯನ್ನು ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಶಿಖರ್ ಧವನ್ (42 ರನ್) ಮತ್ತು ಶ್ರೇಯಸ್ ಅಯ್ಯರ್ (ಅಜೇಯ 47) ಅಮೋಘ ಬ್ಯಾಟಿಂಗ್ ನೆರವಿಂದಾಗಿ 17.5 ಓವರ್ ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ  ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಪೃಥ್ವಿಶಾ 11 ರನ್ ಗಳಿಸಿ ಖಲೀಲ್ ಅಹ್ಮದ್ ಗೆ ವಿಕೆಟ್ ಒಪ್ಪಿಸಿದರೆ, ನಾಯಕ ಶಿಖರ್ ಧವನ್ 42 ರನ್ ಗಳಿಸಿ ರಶೀದ್ ಖಾನ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಗೂಡಿದ ಶ್ರೇಯಸ್ ಅಯ್ಯರ್ (ಅಜೇಯ 47) ಮತ್ತು ರಿಷಬ್ ಪಂತ್ (ಅಜೇಯ 35 ರನ್) ಇನ್ನೂ 13 ಎಸೆತಗಳು ಇರುವಂತೆಯೇ ಗೆಲುವಿನ ಔಪಚಾರಿಕತೆ ಮುಗಿಸಿದರು.  

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ ನಿಗಧಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 134 ರನ್ ಗಳನ್ನು ಸಾಧಿಸಿತು. ದೆಹಲಿಯ ರಬಾಡಾ ಬೌಲಿಂಗ್ ದಾಳಿಗೆ ತತ್ತರಿಸಿದ ಕೇವಲ 134 ರನ್ ಗಳಿಸಿತು. ಅಬ್ದುಲ್ ಸಮಾದ್ ಗಳಿಸಿದ 28 ರನ್ ರನ್ ಗಳು ವೈಯುಕ್ತಿಕ ಗರಿಷ್ಠ ಮೊತ್ತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT