ಜೂಲನ್ ಗೋಸ್ವಾಮಿ 
ಕ್ರಿಕೆಟ್

ಐಸಿಸಿ ಏಕದಿನ ರ್ಯಾಂಕಿಂಗ್: ಎರಡನೇ ಸ್ಥಾನಕ್ಕೇರಿದ ಟೀಂ ಇಂಡಿಯಾದ ಜೂಲನ್ ಗೋಸ್ವಾಮಿ

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಅನುಭವಿ ವೇಗಿ ಭಾರತೀಯ ಜೂಲನ್ ಗೋಸ್ವಾಮಿ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದು, ಏಕದಿನ ಶ್ರೇಯಾಂಕದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.

ದುಬೈ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಅನುಭವಿ ವೇಗಿ ಭಾರತೀಯ ಜೂಲನ್ ಗೋಸ್ವಾಮಿ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದು, ಏಕದಿನ ಶ್ರೇಯಾಂಕದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.

ಮಂಗಳವಾರ ಬಿಡುಗಡೆಯಾದ ಐಸಿಸಿ ಮಹಿಳಾ ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ ಗೋಸ್ವಾಮಿ ಎರಡು ಸ್ಥಾನ ಮೇಲಕ್ಕೇರಿ ಎರಡನೇ ಸ್ಥಾನಕ್ಕೆ ಏರಿದರು. ಮೂರನೇ ಏಕದಿನ ಪಂದ್ಯದಲ್ಲಿ 10 ಓವರ್ ಗಳಲ್ಲಿ 37 ರನ್ ನೀಡಿ ಮೂರು ವಿಕೆಟ್ ಗಳಿಸಿದರು. ಆಲ್‌ರೌಂಡರ್‌ ಶ್ರೇಯಾಂಕದಲ್ಲಿ ಗೋಸ್ವಾಮಿ ಅವರು 10 ನೇ ಸ್ಥಾನಕ್ಕೆ ಏರಿದ್ದಾರೆ.

ಭಾರತದ ನಾಯಕಿ ಮಿಥಾಲಿ ರಾಜ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರಸ್ಥಾನದಿಂದ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಮೊದಲ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಲಿಜೆಲ್ಲೆ ಲೀ, ಎರಡನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಅಲಿಸಾ ಹೀಲಿ ಇದ್ದಾರೆ. ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧನಾ ಆರನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT