ಶುಭಮನ್ ಗಿಲ್, ಶಿಖರ್ ಧವನ್ 
ಕ್ರಿಕೆಟ್

ಪ್ರಥಮ ಏಕದಿನ ಪಂದ್ಯ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಗೆಲುವು

ಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಟೀಂ ಇಂಡಿಯಾದ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಹರಾರೆ: ಜಿಂಬಾಬ್ವೆ ವಿರುದ್ಧ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಟೀಂ ಇಂಡಿಯಾದ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 1-0 ಅಂತರದಲ್ಲಿ ಸರಣಿಯಲ್ಲಿ ಮುನ್ನಡೆ ಪಡೆದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡ 40.3 ಓವರ್ ಗಳಲ್ಲಿ ತನೆಲ್ಲಾ ವಿಕೆಟ್ ಕಳೆದುಕೊಂಡು 189 ರನ್  ಗಳಿಸಲಷ್ಟೇ ಶಕ್ತವಾಯಿತು.

ಜಿಂಬಾಬ್ವೆ ಪರ ತಂಡದ ಪರ ರೆಗಿಸ್ ಚಕಬ್ವಾ  35, ಬ್ರಾಡ್ ಇವಾನ್ಸ್ 33, ರಿಚರ್ಡ್ ನಾಗರ್ವ 34, ರಿಯಾನ್ ಬರ್ಲ್ 11, ಸಿಖಂದರ್ ರಾಜ 12 ರನ್ ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರರು ಒಂದಂಕಿ ದಾಟಲಿಲ್ಲ. ಇದರಿಂದಾಗಿ 40. 3 ಓವರ್ ಗಳಲ್ಲಿ ತನೆಲ್ಲಾ ವಿಕೆಟ್ ಕಳೆದುಕೊಂಡು 189 ರನ್ ಗಳಿಸಲಷ್ಟೇ ಶಕ್ತವಾಯಿತು.ಟೀಂ ಇಂಡಿಯಾ ಪರ  ದೀಪಕ್ ಚಹರ್ 3, ಪ್ರಸಿದ್ಧ್ ಕೃಷ್ಣ 3, ಅಕ್ಸರ್ ಪಟೇಲ್ 3 ವಿಕೆಟ್ ಪಡೆದರೆ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.

ಜಿಂಬಾಬ್ವೆ ನೀಡಿದ 189 ರನ್ ಗಳ ಗುರಿ ಬೆನ್ನಟ್ಟಿದ್ದ ಟೀಂ ಇಂಡಿಯಾ ಇನ್ನೂ 115 ಎಸೆತಗಳು ಬಾಕಿ ಇರುವಂತೆಯೇ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಟೀಂ ಇಂಡಿಯಾ ಪರ ಅಬ್ಬರದ ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ 81 ಹಾಗೂ  ಶುಭ್ ಮನ್ ಗಿಲ್ 82 ರನ್ ಗಳಿಸಿದರು. ಇದರಿಂದಾಗಿ 30.5 ಓವರ್ ಗಳಲ್ಲಿ 192 ರನ್ ಗಳಿಸುವುದರೊಂದಿಗೆ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!