ಶುಭಮನ್ ಗಿಲ್ 
ಕ್ರಿಕೆಟ್

ICC ODI Ranking: 38ನೇ ಸ್ಥಾನಕ್ಕೇರಿದ ಶುಭಮನ್ ಗಿಲ್; 5ನೇ ಸ್ಥಾನ ಕಾಯ್ದುಕೊಂಡ ಕೊಹ್ಲಿ!

ಐಸಿಸಿ ಬಿಡುಗಡೆ ಮಾಡಿರುವ ನೂತನ ಏಕದಿನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ 45ನೇ ಸ್ಥಾನದಿಂದ 38ನೇ ಸ್ಥಾನಕ್ಕೇರಿದ್ದಾರೆ. 

ದುಬೈ: ಐಸಿಸಿ ಬಿಡುಗಡೆ ಮಾಡಿರುವ ನೂತನ ಏಕದಿನ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ 45ನೇ ಸ್ಥಾನದಿಂದ 38ನೇ ಸ್ಥಾನಕ್ಕೇರಿದ್ದಾರೆ. 

22 ವರ್ಷದ ಯುವ ಆಟಗಾರ ಗಿಲ್ ಜಿಂಬಾಬ್ವೆ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಮೂರು ಪಂದ್ಯಗಳ ODI ಸರಣಿಯಲ್ಲಿ ಸ್ಮರಣೀಯ ಪ್ರದರ್ಶನ ನೀಡಿದ್ದರು.  ಹರಾರೆಯಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಗಿಲ್ 130 ರನ್ ಬಾರಿಸುವ ಮೂಲಕ ತಮ್ಮ ಚೊಚ್ಚಲ ಶತಕ ಬಾರಿಸಿದ್ದರು.

ಏತನ್ಮಧ್ಯೆ, ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಆಡದ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 744 ಅಂಕಗಳೊಂದಿಗೆ ಐದನೇ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಜಿಂಬಾಬ್ವೆ ವಿರುದ್ಧದ ಸರಣಿಯಲ್ಲೂ ವಿಶ್ರಾಂತಿ ಪಡೆದಿದ್ದ ಭಾರತದ ನಾಯಕ ರೋಹಿತ್ ಶರ್ಮಾ ಆರನೇ ಸ್ಥಾನದಲ್ಲಿ ಸ್ಥಿರವಾಗಿದ್ದಾರೆ.

ಪಾಕಿಸ್ತಾನದ ನಾಯಕ ಬಾಬರ್ ಅಜಮ್ 891 ಅಂಕಗಳೊಂದಿಗೆ ಏಕದಿನ ತಂಡದ ರ್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ ಸ್ಥಾನದಲ್ಲಿ ಮುಂದೂವರೆದಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾದ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (789) ಎರಡನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಸ್ಟಾರ್ ವೇಗಿ ಟ್ರೆಂಟ್ ಬೌಲ್ಟ್ ಅಗ್ರಸ್ಥಾನದಲ್ಲಿದ್ದರೆ, ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಅಗ್ರಸ್ಥಾನ ಪಡೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT