ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಏಷ್ಯಾ ಕಪ್ 2022: ಭಾರತಕ್ಕೆ 148 ರನ್ ಗಳ ಟಾರ್ಗೆಟ್ ನೀಡಿದ ಪಾಕಿಸ್ತಾನ

ಏಷ್ಯಾಕಪ್ 2022 ಟೂರ್ನಿಯ ಇಂದಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಟೀಂ ಇಂಡಿಯಾಗೆ 148 ರನ್ ಗಳ ಗುರಿ ನೀಡಿದೆ.

ಟೀಂ ಇಂಡಿಯಾ
Vishwanath S
Updated On : 28 Aug 2022, 10:07 pm

ದುಬೈ: ಏಷ್ಯಾಕಪ್ 2022 ಟೂರ್ನಿಯ ಇಂದಿನ ಹೈ ವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಟೀಂ ಇಂಡಿಯಾಗೆ 148 ರನ್ ಗಳ ಗುರಿ ನೀಡಿದೆ.

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಏಷ್ಯಾ ಕಪ್ 2022ರ ಎರಡನೇ ಪಂದ್ಯದಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದರು. ಈ ಹಿನ್ನೆಲೆಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 147 ರನ್ ಗಳಿಗೆ ಆಲೌಟ್ ಆಯಿತು. 

ಪಾಕ್ ಪರ ಬ್ಯಾಟಿಂಗ್ ನಲ್ಲಿ ಮೊಹಮ್ಮದ್ ರಿಜ್ವಾನ್ 43, ಬಾಬರ್ ಅಜಂ 10, ಜಮಾನ್ 10, ಇಫ್ತಿಕರ್ ಅಹ್ಮದ್28, ಧಹನಿ 16 ರನ್ ಗಳಿಸಿದ್ದಾರೆ. ಭಾರತ ಪರ ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್ 4, ಹಾರ್ದಿಕ್ ಪಾಂಡ್ಯ 3 ಹರ್ಷ್ದೀಪ್ ಸಿಂಗ್ 2 ವಿಕೆಟ್ ಪಡೆದಿದ್ದಾರೆ.

Advertisement

Advertisement

ಇದನ್ನೂ ಓದಿ: ಶ್ರೀನಗರ: ಭಾರತ-ಪಾಕ್ ಪಂದ್ಯ ವೀಕ್ಷಿಸದಂತೆ ವಿದ್ಯಾರ್ಥಿಗಳಿಗೆ ಎನ್‌ಐಟಿ ಸೂಚನೆ; ಉಲ್ಲಂಘನೆಗೆ ರೂ. 5,000 ದಂಡ ಸಾಧ್ಯತೆ!

ಈ ಹಿಂದೆ ಪಾಕಿಸ್ತಾನವನ್ನು ಭಾರತ 2021 ರ ಐಸಿಸಿ ಪುರುಷರ T20 ವಿಶ್ವಕಪ್‌ನಲ್ಲಿ ಎದುರುಗೊಂಡಿತ್ತು. ಆಂದಿನ ಪಂದ್ಯದಲ್ಲಿ ಪಾಕಿಸ್ತಾನ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು. ಅಲ್ಲದೆ ಭಾರತಕ್ಕೆ ಪಾಕಿಸ್ತಾನದ ವಿರುದ್ಧ ವಿಶ್ವಕಪ್ ಟೂರ್ನಿಯಲ್ಲಿ ಅದು ಮೊದಲ ಸೋಲುಕೂಡ ಆಗಿತ್ತು. ಇದೀಗ ಭಾರತಕ್ಕೆ ಆ ಸೋಲಿನ ಸೇಡು ತೀರಿಸಿಕೊಳ್ಳುವ ಅವಕಾಶ ದೊರೆತಿದೆ.

ಈ ಹೈ-ವೋಲ್ಟೇದ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ, ಶಾಹೀನ್ ಅಫ್ರಿದಿ ಮತ್ತು ಹರ್ಷಲ್ ಪಟೇಲ್ ಸೇರಿದಂತೆ ಕೆಲವು ಸ್ಟಾರ್ ಆಟಗಾರರ ಹೆಸರುಗಳು ಕಾಣೆಯಾಗಿರುವುದು ಅಭಿಮಾನಿಗಳಿಗೆ ನಿರಾಸೆ ತಂದಿದೆ. ಪಾಕಿಸ್ತಾನದ ಪರ ನಸೀಮ್ ಶಾ ಭಾರತದ ವಿರುದ್ಧದ ಪಂದ್ಯದ ಮೂಲಕ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement