ಕೋವಿಡ್-19 ನೆಗೆಟಿವ್, ಟೀಂ ಇಂಡಿಯಾ ಸೇರಿದ ಕೋಚ್ ರಾಹುಲ್ ದ್ರಾವಿಡ್
ಕೊರೋನಾದಿಂದ ಗುಣಮುಖರಾದ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್, ಏಷ್ಯಾ ಕಪ್ 2022 ಟೂರ್ನಿಗಾಗಿ ದುಬೈ ತಲುಪಿದ್ದಾರೆ.
ದುಬೈ: ಕೊರೋನಾದಿಂದ ಗುಣಮುಖರಾದ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್, ಏಷ್ಯಾ ಕಪ್ 2022 ಟೂರ್ನಿಗಾಗಿ ದುಬೈ ತಲುಪಿದ್ದಾರೆ. ಕೋವಿಡ್-19 ನೆಗೆಟಿವ್ ಪರೀಕ್ಷೆ ವರದಿ ಬಳಿಕ ಅವರು ಹೋಟೆಲ್ ನಲ್ಲಿ ಟೀಂ ಇಂಡಿಯಾ ಸೇರಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.
ಇಂದು ಸಂಜೆ ಸಾಂಪ್ರದಾಯಿಕ ಎದುರಾಳಿ ತಂಡಗಳಾದ ಭಾರತ- ಪಾಕಿಸ್ತಾನ ಮುಖಾಮುಖಿಯಾಗಲಿವೆ. ಕಳೆದ ವರ್ಷ ಹೀನಾಯ ಸೋಲಿನ ನಂತರ ಪ್ರತೀಕಾರ ತೀರಿಸಿಕೊಳ್ಳಲು ಉಭಯ ತಂಡಗಳು ಸಜ್ಜಾಗಿವೆ. ದ್ರಾವಿಡ್ ಅನುಪಸ್ಥಿತಿಯಲ್ಲಿ ತಂಡದಲ್ಲಿದ್ದ ಹಂಗಾಮಿ ಕೋಚ್ ವಿವಿಎಸ್ ಲಕ್ಷ್ಮಣ್, ಇಂಡಿಯಾ ಎ ತಂಡ ನೋಡಿಕೊಳ್ಳಲು ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಈ ವಾರದ ಆರಂಭದಲ್ಲಿ ರಾಹುಲ್ ದ್ರಾವಿಡ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿತ್ತು. ಏಷ್ಯಾ ಕಪ್ 2022 ಟೂರ್ನಿಯಾಗಿ ದುಬೈಗೆ ತೆರಳಲು ಟೀಂ ಇಂಡಿಯಾದ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.