ಆಫ್ಗಾನಿಸ್ತಾನಕ್ಕೆ ಜಯ 
ಕ್ರಿಕೆಟ್

ಏಷ್ಯಾಕಪ್ 2022: ಬಾಂಗ್ಲಾದೇಶದ ವಿರುದ್ಧವೂ ಜಯ ಗಳಿಸಿದ ಆಫ್ಘಾನಿಸ್ತಾನ

ಏಷ್ಯಾಕಪ್ 2022 ಟೂರ್ನಿಯ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಆಫ್ಘಾನಿಸ್ತಾನ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ದುಬೈ: ಏಷ್ಯಾಕಪ್ 2022 ಟೂರ್ನಿಯ ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಆಫ್ಘಾನಿಸ್ತಾನ ತಂಡ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ 128 ರನ್ ಗಳ ಗುರಿಯನ್ನು ಬೆನ್ನುಹತ್ತಿದ ಆಫ್ಘಾನಿಸ್ತಾನ 18.3 ಓವರ್ ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿ 7 ವಿಕೆಟ್ ಗಳ ಅಂತರದ ಭರ್ಜರಿ ಜಯ ದಾಖಲಿಸಿದೆ. 

ಮೊದಲು ಬ್ಯಾಟಿಂಗ್ ಮಾಡಿದ್ದ ಬಾಂಗ್ಲಾದೇಶ ತಂಡ ನಿಗದಿತ 20 ಓವರ್ ಗಳಲ್ಲಿ ಮೊಸದ್ದೇಕ್ ಹುಸೇನ್ (ಅಜೇಯ 48) ಅವರ ಏಕಾಂಗಿ ಹೋರಾಟದ ನೆರವಿನಂದ 7 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಲಷ್ಟೇ ಶಕ್ತವಾಯಿತು. ಆಪ್ಘನ್ ಪರ ಮಾರಕ ಬೌಲಿಂದ್ ದಾಳಿ ನಡೆಸಿದ ಮುಜೀಬ್ ಮತ್ತು ರಷೀದ್ ಖಾನ್ ತಲಾ 3 ವಿಕೆಟ್ ಪಡೆದರು.

ಬಾಂಗ್ಲಾದೇಶ ನೀಡಿದ ಗುರಿಯನ್ನು ಬೆನ್ನು ಹತ್ತಿದ ಆಫ್ಘಾನಿಸ್ತಾನ ಇಬ್ರಾಹಿಂ ಜದ್ರಾನ್ (ಅಜೇಯ 42) ಮತ್ತು ನಜೀಬುಲ್ಲಾ ಜದ್ರಾನ್ (ಅಜೇಯ 43) ಅವರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ 18.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿ 7 ವಿಕೆಟ್ ಗಳ ಅಂತರದ ಜಯ ಸಾಧಿಸಿತು. ಬೌಲಿಂಗ್ ನಲ್ಲಿ ಬಾಂಗ್ಲಾದೇಶದ ಪತನಕ್ಕೆ ಕಾರಣವಾದ ಮುಜೀಬ್ ಉರ್ ರೆಹಮಾನ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಗೆಲುವಿನ ಮೂಲಕ ಆಫ್ಘಾನಿಸ್ತಾನ ಟೂರ್ನಿಯಲ್ಲಿ ಸತತ 2ನೇ ಗೆಲುವು ಸಾಧಿಸಿದ್ದು, ಈ ಹಿಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿತ್ತು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!