ಟ್ರೋಫಿ ಅನಾವರಣಗೊಳಿಸಿದ ರಾಹುಲ್, ಲಿಟ್ಟನ್ ದಾಸ್ 
ಕ್ರಿಕೆಟ್

ನಾಳೆಯಿಂದ ಭಾರತ- ಬಾಂಗ್ಲಾದೇಶ ಏಕದಿನ ಸರಣಿ: ಟ್ರೋಫಿ ಅನಾವರಣಗೊಳಿಸಿದ ರೋಹಿತ್, ಲಿಟ್ಟನ್ ದಾಸ್

ಭಾರತ- ಬಾಂಗ್ಲಾದೇಶ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಂದು ಟ್ರೋಫಿಯನ್ನು ಅನಾವರಣಗೊಳಿಸಲಾಗಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಬಾಂಗ್ಲಾದೇಶದ ನಾಯಕ ಲಿಟ್ಟನ್ ದಾಸ್ ಅವರು ಟ್ರೋಫಿಯನ್ನು ಅನಾವರಣಗೊಳಿಸಿದರು.

ಮಿರ್ ಪುರ: ಭಾರತ- ಬಾಂಗ್ಲಾದೇಶ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಂದು ಟ್ರೋಫಿಯನ್ನು ಅನಾವರಣಗೊಳಿಸಲಾಗಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಬಾಂಗ್ಲಾದೇಶದ ನಾಯಕ ಲಿಟ್ಟನ್ ದಾಸ್ ಅವರು ಟ್ರೋಫಿಯನ್ನು ಅನಾವರಣಗೊಳಿಸಿದರು.

ನ್ಯೂಜಿಲೆಂಡ್ ವಿರುದ್ಧದ ಸರಣಿ ಸೋಲಿನ ಬಳಿಕ ಭಾರತ ಬಾಂಗ್ಲಾದೇಶದ ವಿರುದ್ಧ ಸೆಣಸಾಟ ನಡೆಸುತ್ತಿದ್ದು, ಈ ಸರಣಿ ಭಾರತದ ಪಾಲಿಗೆ ಮಹತ್ವದ್ದಾಗಿದೆ. ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕರಾಗಿ ವಾಪಸ್ಸಾಗಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಧ್ಯತೆಯಿದೆ.

ಭಾರತ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ) ಕೆಎಲ್ ರಾಹುಲ್ (ಉಪ ನಾಯಕ) ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್ ಕೀಪರ್) ಇಶಾನ್ ಕಿಶಾನ್ (ವಿಕೆಟ್ ಕೀಪರ್) ಶಹಬಾಜ್ ಅಹ್ಮದ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮದ್ ಸಿರಾಜ್, ದೀಪಕ್ ಚಹರ್, ಕುಲದೀಪ್ ಸೇನ್

ಬಾಂಗ್ಲಾದೇಶ ತಂಡ ಇಂತಿದೆ: ತಮಿಮ್ ಇಕ್ಬಾಲ್, ಲಿಟ್ಟನ್ ದಾಸ್, ಅನಾಮುಲ್ ಹಕ್, ಶಕೀಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್, ಯಾಸಿರ್ ಅಲಿ, ಮೆಹಿದಿ ಹಸನ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್, ಹಸನ್ ಮಹಮ್ಮದ್, ಎಬಾಡೋತ್ ಹೊಸೈನ್, ನಸುಮ್ ಅಹ್ಮದ್, ಮಹಮ್ಮದುಲ್ಲಾ, ನಜ್ಮುಲ್ ಹೊಸೈನ್ ಶಾಂಟೋ ಮತ್ತು ನೂರುಲ್ ಹಸನ್ ಸೋಹನ್
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್​ ಟ್ವಿಸ್ಟ್: TVK ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ; DMK ಮೈತ್ರಿಗೆ ಭಾರಿ ಶಾಕ್, ಹೊಸ ಮೈತ್ರಿ ಸರ್ಕಾರ ಅಧಿಕಾರಕ್ಕೆ..!

TVK–ಕಾಂಗ್ರೆಸ್ ಮೈತ್ರಿ: ಸಂಪುಟದಲ್ಲಿ 2 ಸ್ಥಾನಕ್ಕೆ 'ಕೈ' ಬೇಡಿಕೆ, ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆ ಬಹುತೇಕ ಖಚಿತ..!

ಸಿಎಂ ಹುದ್ದೆ ತ್ಯಾಗಕ್ಕೆ ಸಿದ್ದರಾಮಯ್ಯ ಸಿದ್ದ: ಹೈಕಮಾಂಡ್ ಆದೇಶಕ್ಕೆ ಪರಮೇಶ್ವರ್ ಬದ್ಧ; ಮುಖ್ಯಮಂತ್ರಿ ಸ್ಥಾನ ಒಲ್ಲೆ ಎಂದಿದ್ದೇಕೆ ಖರ್ಗೆ?

ಸೋಲು ಬಳಿಕವೂ ಹಠಕ್ಕೆ ಬಿದ್ದ ಮಮತಾ ಬ್ಯಾನರ್ಜಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ಎಂದು ಜೇಠ್ಮಲಾನಿ ಕಿಡಿ

ಹೈಕಮಾಂಡ್ ಕರೆದ ತಕ್ಷಣ ದೆಹಲಿಗೆ ಪ್ರಯಾಣ: 2028 ರಲ್ಲೂ ನಮ್ಮದೇ ಸರ್ಕಾರ ಫಿಕ್ಸ್; ಸಿಎಂ ಸಿದ್ದರಾಮಯ್ಯ

SCROLL FOR NEXT