ಇಶಾನ್ ಕಿಶನ್-ಕ್ರಿಸ್ ಗೇಯ್ಲ್ 
ಕ್ರಿಕೆಟ್

ಬಾಂಗ್ಲಾ ವಿರುದ್ಧ ಭರ್ಜರಿ ಬ್ಯಾಟಿಂಗ್; ಕ್ರಿಸ್ ಗೇಯ್ಲ್ ದಾಖಲೆ ಧೂಳಿಪಟ, ಎಲೈಟ್ ಗ್ರೂಪ್ ಸೇರ್ಪಡೆಯಾದ ಇಶಾನ್ ಕಿಶನ್

ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಮೂಲಕ ದ್ವಿಶತಕ ಸಾಧನೆ ಮಾಡಿದ ಇಶಾನ್ ಕಿಶನ್ ಜಾಗತಿಕ ಮತ್ತು ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಚಟ್ಟೋಗ್ರಾಮ್: ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಮೂಲಕ ದ್ವಿಶತಕ ಸಾಧನೆ ಮಾಡಿದ ಇಶಾನ್ ಕಿಶನ್ ಜಾಗತಿಕ ಮತ್ತು ಅಪರೂಪದ ದಾಖಲೆ ನಿರ್ಮಿಸಿದ್ದಾರೆ.

ಹೌದು... ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಬರೊಬ್ಬರಿ 210 ರನ್‌ಗಳಿಸಿ ವಿಕೆಟ್ ಒಪ್ಪಿಸಿದರು. 131 ಎಸೆತಗಳನ್ನು ಎದುರಿಸಿದ ಕಿಶನ್ 24 ಬೌಂಡರಿ ಹಾಗೂ 10 ಸಿಕ್ಸರ್ ಸಿಡಿಸಿದ್ದಾರೆ. ಇಶಾನ್ ಕಿಶನ್ 85 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಅದಾದ ಬಳಿಕ ರನ್‌ ವೇಗವನ್ನು ಮತ್ತಷ್ಟು ಹೆಚ್ಚಿಸಿದ ಇಶಾನ್ ಕಿಶನ್ ರನ್ ವೇಗವನ್ನು ಭಾರೀ ಪ್ರಮಾಣದಲ್ಲಿ ಏರಿಸಿದರು. ಬಳಿಕ ದ್ವಿಶತಕ ಸಿಡಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ವೇಗದ ದ್ವಿಶತಕ; ಕ್ರಿಸ್ ಗೇಯ್ಲ್ ದಾಖಲೆ ಪತನ
ಬಾಂಗ್ಲಾದೇಶ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಇಶಾನ್ ಕಿಶನ್ ಬೌಂಡರಿ ಸಿಕ್ಸರ್‌ಗಳ ಮಳೆಗೈದಿದ್ದಾರೆ. ಕೇವಲ 126 ಎಸೆತಗಳಲ್ಲಿ ದ್ವಿಶತಕದ ಮೈಲಿಗಲ್ಲುದಾಟಿದ ಇಶಾನ್ ಕಿಶನ್ ಅತ್ಯಂತ ವೇಗವಾಗಿ ದ್ವಿಶತಕ ಸಿಡಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಕ್ರಿಸ್ ಗೇಲ್ 138 ಎಸೆತಗಳಲ್ಲಿ ದ್ವಿಶತಕ ಸಿಡಿಸಿ ಈ ದಾಖಲೆಯನ್ನು ಬರೆದಿದ್ದರು. ಈ ದಾಖಲೆ ಈಗ ಮುರಿದಿದೆ.

ವೇಗದ ದ್ವಿಶತಕ: ಅಗ್ರ ಸ್ಥಾನದಲ್ಲಿ ಇಶಾನ್ ಕಿಶನ್
ಇನ್ನು ಈ ವರೆಗೂ ದಾಖಲಾದ ವೇಗದ ದ್ವಿಶತಕಗಳ ಪೈಕಿ ಇಂದು ಇಶಾನ್ ಕಿಶನ್ ಸಿಡಿಸಿದ ದ್ವಿಶತಕ ಅಗ್ರ ಸ್ಥಾನಕ್ಕೇರಿದೆ. ಈ ಪಟ್ಟಿಯಲ್ಲಿ 138 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ವಿಂಡೀಸ್ ದೈತ್ಯ ಕ್ರಿಸ್ ಗೇಯ್ಲ್ 2ನೇ ಸ್ಥಾನಕ್ಕೆ ಕುಸಿದಿದ್ದು, 140 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ್ದ ಭಾರತದ ವಿರೇಂದ್ರ ಸೆಹ್ವಾಗ್ 3 ಮತ್ತು 147 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ಸಚಿನ್ ನಾಲ್ಕನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. 148 ಎಸೆತಗಳಲ್ಲಿ ದ್ವಿಶತಕ ಸಿಡಿಸಿದ ಪಾಕಿಸ್ತಾನದ ಫಖರ್ ಜಮಾನ್ 5ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT