ಚಟ್ಟೋಗ್ರಾಮ್: ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಮೂಲಕ ದ್ವಿಶತಕ ಸಾಧನೆ ಮಾಡಿದ ಇಶಾನ್ ಕಿಶನ್ ದಾಖಲೆ ನಿರ್ಮಿಸಿದ್ದು, ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಮತ್ತು ಜಗತ್ತಿನ 9ನೇ ಅಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೊಘ ಬ್ಯಾಟಿಂಗ್ ಪ್ರದರ್ಶಿಸಿದೆ. ಅದರಲ್ಲೂ ರೋಹಿತ್ ಶರ್ಮಾ ಅಲಭ್ಯತೆಯ ಹಿನ್ನೆಲೆಯಲ್ಲಿ ಅವಕಾಶ ಪಡೆದುಕೊಂಡ ಇಶಾನ್ ಕಿಶನ್ ತಮ್ಮ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ದಾಖಲೆಯ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ದಿಗ್ಗಜ ಕ್ರಿಕೆಟಿಗರ ಸಾಲಿಗೆ ಸೇರಿದ್ದಾರೆ.
ಇದನ್ನೂ ಓದಿ: ಬಾಂಗ್ಲಾ ವಿರುದ್ಧ ಭರ್ಜರಿ ಬ್ಯಾಟಿಂಗ್; ಕ್ರಿಸ್ ಗೇಯ್ಲ್ ದಾಖಲೆ ಧೂಳಿಪಟ, ಎಲೈಟ್ ಗ್ರೂಪ್ ಸೇರ್ಪಡೆಯಾದ ಇಶಾನ್ ಕಿಶನ್
ದ್ವಿಶತಕ ಸಿಡಿಸಿದ ನಾಲ್ಕನೇ ಭಾರತೀಯ
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದ್ವಿಶತಕವನ್ನು ಸಿಡಿಸಿದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ ಇಶಾನ್ ಕಿಶನ್. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ರೋಹಿತ್ ಶರ್ಮಾ ಈ ಸಾಧನೆಯನ್ನು ಮಾಡಿದ್ದರು. ಈ ಪೈಕಿ ವೀರೇಂದ್ರ ಸೆಹ್ವಾಗ್, ಹಾಗೂ ಸಚಿನ್ ತೆಂಡೂಲ್ಕರ್ ಒಂದು ದ್ವಿಶತಕ ಸಿಡಿಸಿದ್ದರೆ ರೋಹಿತ್ ಶರ್ಮಾ ಹೆಸರಿನಲ್ಲಿ ಮೂರು ದ್ವಿಶತಕಗಳಿದೆ. ಒಟ್ಟಾರೆಯಾಗಿ ಭಾರತದ ಪರ ದಾಖಲಾದ ಆರನೇ ದ್ವಿಶತಕ ಇದು ಎಂಬುದು ಮತ್ತೊಂದು ಗಮನಾರ್ಹ ಅಂಶ.
ಜಗತ್ತಿನ 7ನೇ ಆಟಗಾರ
ಇನ್ನು ಜಾಗತಿಕ ಕ್ರಿಕೆಟ್ ನಲ್ಲಿ ದ್ವಿಶತಕ ಸಿಡಿಸಿದ 7ನೇ ಆಟಗಾರ ಎಂಬ ಕೀರ್ತಿಗೂ ಇಶಾನ್ ಕಿಶನ್ ಭಾಜನರಾಗಿದ್ದು, ಇದಕ್ಕೂ ಮೊದಲು ಭಾರತದ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ನ್ಯೂಜಿಲೆಂಡ್ ನ ಮಾರ್ಟಿನ್ ಗಪ್ಟಿಲ್, ವಿಂಡೀಸ್ ನ ಕ್ರಿಸ್ ಗೇಯ್ಲ್ ಮತ್ತು ಪಾಕಿಸ್ತಾನದ ಫಖರ್ ಜಮಾನ್ ದ್ವಿಶತಕ ಸಿಡಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.
ಜಾಗತಿಕ ಏಕದಿನ ಕ್ರಿಕೆಟ್ ನಲ್ಲಿ ಈ ವರೆಗೂ 9 ದ್ವಿಶತಕಗಳು ದಾಖಲಾಗಿದ್ದು ಈ ಪೈಕಿ ಭಾರತದ ರೋಹಿತ್ ಶರ್ಮಾ 3 ಬಾರಿ ಈ ಸಾಧನೆ ಮಾಡಿದ್ದಾರೆ.