ಜಯದೇವ್ ಉನಾದ್ಕತ್ 
ಕ್ರಿಕೆಟ್

ಭಾರತ vs ಬಾಂಗ್ಲಾದೇಶ ಟೆಸ್ಟ್ ಸರಣಿ; ಗಾಯಾಳು ಶಮಿ ಬದಲಿಗೆ ಜಯದೇವ್ ಉನಾದ್ಕತ್ ಗೆ ಸ್ಥಾನ

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಗಾಯಗೊಂಡಿರುವ ಮೊಹಮ್ಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. 

ಚಟ್ಟೋಗ್ರಾಮ್: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಗಾಯಗೊಂಡಿರುವ ಮೊಹಮ್ಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. 

ಭುಜದ ಗಾಯಕ್ಕೆ ತುತ್ತಾಗಿರುವ ಭಾರತದ ವೇಗಿ ಮಹಮದ್ ಶಮಿ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. ಶಮಿ ಪ್ರಸ್ತುತ ಬೆಂಗಳೂರಿನಲ್ಲಿರುವ ಬಿಸಿಸಿಐನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತಮ್ಮ ಭುಜದ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಂಗ್ಲಾದೇಶ ಪ್ರವಾಸದ ಮೊದಲು ತರಬೇತಿ ಅವಧಿಯಲ್ಲಿ ಅವರು ಬಲ ಭುಜದ ಗಾಯಕ್ಕೆ ತುತ್ತಾಗಿದ್ದರು. ಸಮಯಕ್ಕೆ ಸರಿಯಾಗಿ ಚೇತರಿಸಿಕೊಳ್ಳಲು ವಿಫಲರಾದ ಕಾರಣ ಶಮಿ ಅವರನ್ನು ಏಕದಿನ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ವೈದ್ಯರ ಸಲಹೆ ಮೇರೆಗೆ ಟೆಸ್ಟ್‌ ಸರಣಿಯಿಂದಲೂ ಅವರನ್ನು ಕೈ ಬಿಡಲಾಗಿದೆ.

ಅವರ ಬದಲಿಗೆ ಸೌರಾಷ್ಟ್ರ ನಾಯಕ ಜಯದೇವ್ ಉನಾದ್ಕತ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಸ್ತುತ ರಾಜ್‌ಕೋಟ್‌ನಲ್ಲಿರುವ ಜಯದೇವ್ ಉನಾದ್ಕತ್ ಅವರು ತಮ್ಮ ವೀಸಾ ಅವಶ್ಯಕತೆಗಳನ್ನು ಪೂರ್ಣಗೊಳಿಸಲು ಕಾಯುತ್ತಿದ್ದಾರೆ ಮತ್ತು ಮುಂದಿನ ಒಂದೆರಡು ದಿನಗಳಲ್ಲಿ ಬಾಂಗ್ಲಾದೇಶಕ್ಕೆ ಪ್ರಯಾಣಿಸಲಿದ್ದು, ಚಟ್ಟೋಗ್ರಾಮ್‌ನಲ್ಲಿ ಟೆಸ್ಟ್ ತಂಡವನ್ನು ಸೇರುವ ಸಾಧ್ಯತೆಯಿದೆ. ಅವರು ಇತ್ತೀಚೆಗೆ ಸೌರಾಷ್ಟ್ರವನ್ನು ವಿಜಯ್ ಹಜಾರೆ ಪ್ರಶಸ್ತಿಗೆ ಮುನ್ನಡೆಸಿದ್ದರು.

ತಂಡಕ್ಕೆ ಸೇರ್ಪಡೆಯಾಗುತ್ತಿರುವ 2ನೇ ಬದಲೀ ಆಟಗಾರ
ಇನ್ನು ಹಾಲಿ ಬಾಂಗ್ಲಾದೇಶ ಪ್ರವಾಸದಲ್ಲಿ ಭಾರತಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದ್ದು, ಉನಾದ್ಕತ್ ತಂಡಕ್ಕೆ ಸೇರ್ಪಡೆಯಾಗುತ್ತಿರುವ 2ನೇ ಆಟಗಾರರಾಗಿದ್ದಾರೆ. ಈ ಹಿಂದೆ 2ನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ನಾಯಕ ರೋಹಿತ್ ಶರ್ಮಾ ಅವರ ಬದಲಿಗೆ ಬಂಗಾಳದ ಆರಂಭಿಕ ಆಟಗಾರ ಅಭಿಮನ್ಯು ಈಶ್ವರನ್ ಅವರನ್ನು ಆಯ್ಕೆ ಮಾಡಲಾಗಿತ್ತು. ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ಕೂಡ ರವೀಂದ್ರ ಜಡೇಜಾಗೆ ಸಂಭಾವ್ಯ ಬದಲಿ ಆಟಗಾರನಾಗಿದ್ದಾರೆ. ಇದೀಗ ಉನಾದ್ಕತ್ ಶಮಿ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT