ಮುಂಬೈ: ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಗಾಯಾಳು ನಾಯಕ ರೋಹಿತ್ ಶರ್ಮಾ ಅವರಿಗೆ ಮೊದಲ ಟೆಸ್ಟ್ ನಿಂದ ವಿಶ್ರಾಂತಿ ನೀಡಲಾಗಿದೆ.
ಹೌದು.. ಇದೇ ಡಿಸೆಂಬರ್ 14, ಬುಧವಾರದಿಂದ ಬಾಂಗ್ಲಾದೇಶ ವಿರುದ್ಧದ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಗಾಯದ ಸಮಸ್ಯೆಯಿಂದಾಗಿ ನಾಯಕ ರೋಹಿತ್ ಶರ್ಮಾ ಅವರು ಮೊದಲ ಟೆಸ್ಟ್‌ನಿಂದ ಹೊರಗುಳಿಯಲಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮೊದಲ ಟೆಸ್ಟ್ ನಲ್ಲಿ ಕೆ.ಎಲ್ ರಾಹುಲ್ ನಾಯಕತ್ವ ನಿಭಾಯಿಸಲಿದ್ದಾರೆ. ರೋಹಿತ್ ಸ್ಥಾನಕ್ಕೆ ಅಭಿಮನ್ಯು ಈಶ್ವರನ್ ಅವರನ್ನು ನಿಯೋಜಿಸಲಾಗಿದೆ.
ಉಳಿದಂತೆ ಗಾಯಾಳು ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಅವರನ್ನು ಟೆಸ್ಟ್ ಸರಣಿಯಿಂದಲೇ ಕೈ ಬಿಡಲಾಗಿದೆ. ಅವರ ಸ್ಥಾನಕ್ಕೆ ನವದೀಪ್ ಸೈನಿ ಮತ್ತು ಸೌರಭ್ ಕುಮಾರ್ ತಂಡ ಸೇರಿಕೊಳ್ಳಲ್ಲಿದ್ದಾರೆ. ಸಮಿತಿಯು ವೇಗದ ಬೌಲರ್ ಜಯದೇವ್ ಉನದ್ಕತ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿದೆ.
ಮೊದಲ ಟೆಸ್ಟ್ ಇದೇ 14ರಂದು ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ನಡೆಯಲಿದ್ದು, ಎರಡನೇ ಟೆಸ್ಟ್ 22ರಿಂದ ಡಾಕಾದ ಶೇರ್ ಇ ಬಾಂಗ್ಲಾ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ಇದನ್ನೂ ಓದಿ: ಬಾಂಗ್ಲಾ ವಿರುದ್ಧ ಕೊಹ್ಲಿ ಶತಕ: ರಿಕ್ಕಿ ಪಾಂಟಿಂಗ್ ಹಿಂದಿಕ್ಕಿದ ಭಾರತದ ರನ್ ಮೆಷಿನ್, ಸಚಿನ್ ದಾಖಲೆ ಮುಂದಿನ ಗುರಿ!
ತಂಡ ಇಂತಿದೆ:
ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಸಿ ಪೂಜಾರ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಆರ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಎಸ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಭ್ ಕುಮಾರ್, ಜಯದೇವ್ ಉನದ್ಕತ್