ಕ್ರಿಕೆಟ್

ರಹಾನೆ, ಇಶಾಂತ್ ವಾರ್ಷಿಕ ಒಪ್ಪಂದ ರದ್ದು ಸಾಧ್ಯತೆ; ಸೂರ್ಯಕುಮಾರ್, ಶುಭಮನ್ ಗೆ ಬಡ್ತಿ

Lingaraj Badiger

ನವದೆಹಲಿ: ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್‌ಗಳಾದ ಅಜಿಂಕ್ಯ ರಹಾನೆ ಮತ್ತು ಇಶಾಂತ್ ಶರ್ಮಾ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತನ್ನ ವಾರ್ಷಿಕ ಕೇಂದ್ರ ಒಪ್ಪಂದದಿಂದ ತೆಗೆದುಹಾಕುವ ಸಾಧ್ಯತೆ ಇದೆ.

2022-23ನೇ ಸಾಲಿನ ವಾರ್ಷಿಕ ಒಪ್ಪಂದ ಪಟ್ಟಿಯಲ್ಲಿ ಶುಭಮನ್ ಗಿಲ್ ಮತ್ತು ಸೂರ್ಯಕುಮಾರ್ ಯಾದವ್ ಅವರಿಗೆ ಬಡ್ತಿ ನೀಡಬಹುದು. ಈ ಸಂಬಂಧ ಡಿಸೆಂಬರ್ 21 ರಂದು ಅಪೆಕ್ಸ್ ಕೌನ್ಸಿಲ್ ಸಭೆ ಕರೆಯಲಾಗಿದ್ದು, ಸಭೆಯ ನಂತರ ಅಂತಿಮ ಪಟ್ಟಿ ಪ್ರಕಟವಾಗಲಿದೆ.

ಭವಿಷ್ಯದ ಟಿ-20 ನಾಯಕ ಎಂದು ಪರಿಗಣಿಸಲ್ಪಟ್ಟಿರುವ ಹಾರ್ದಿಕ್ ಪಾಂಡ್ಯ ಅವರು ಸಿ ದರ್ಜೆಯ ಒಪ್ಪಂದಿಂದ ಬಿ ದರ್ಜೆಗೆ ಬಡ್ತಿ ಪಡೆಯುವ ಸಾಧ್ಯತೆ ಇದೆ.

ಅಜೆಂಡಾದಲ್ಲಿ 12 ವಿಷಯಗಳನ್ನು ಹೊಂದಿರುವ ಈ ಸಭೆಯು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ.

ಟಿ20 ವಿಶ್ವಕಪ್ ಮತ್ತು ಬಾಂಗ್ಲಾದೇಶ ಏಕದಿನ ಪಂದ್ಯಗಳಲ್ಲಿ ಭಾರತೀಯ ತಂಡದ ಪ್ರದರ್ಶನದ ವಿಮರ್ಶೆಯು ಸಭೆಯ ಅಜೆಂಡಾದಲ್ಲಿಲ್ಲ. ಆದರೆ ಬಿಸಿಸಿಐ ಅಧ್ಯಕ್ಷರು ಅಗತ್ಯವೆಂದು ಭಾವಿಸಿದರೆ,  ಬಾಂಗ್ಲಾ ಪ್ರವಾಸದಲ್ಲಿ ಭಾರತ ತಂಡ ಏಕದಿನ ಕ್ರಿಕೆಟ್‌ ಸರಣಿಯಲ್ಲಿ ನೀಡಿದ ಪ್ರದರ್ಶನದ ಬಗ್ಗೆ ಚರ್ಚೆ ನಡೆಯಲಿದೆ.

ಸೂರ್ಯಕುಮಾರ್‌ ಯಾದವ್‌ ಅವರನ್ನು 'ಸಿ' ಗುಂಪಿನಲ್ಲಿ ಇಡಲಾಗಿತ್ತು. ಆದರೆ, ಕಳೆದ ಒಂದು ವರ್ಷದಲ್ಲಿ ಅವರ ಪ್ರದರ್ಶನ ಅಮೋಘವಾಗಿದ್ದು, 'ಬಿ' ಗುಂಪಿನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಅವರು ನಂ.1 ಬ್ಯಾಟ್ಸ್‌ಮನ್‌ ಎಂಬುದನ್ನು ಇಲ್ಲಿ ಪರಿಗಣಿಸಬೇಕಾಗುತ್ತದೆ," ಎಂದು ಬಿಸಿಸಿಐನ ಹಿರಿಯ ಅಧಿಕಾರಿ ಒಬ್ಬರು ಮಾಹಿತಿ ನೀಡಿದ್ದಾರೆ.

SCROLL FOR NEXT