ಸ್ಮೃತಿ ಮಂದಾನ 
ಕ್ರಿಕೆಟ್

ಐಸಿಸಿ ರ್ಯಾಂಕಿಂಗ್: ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕ ಗಳಿಸಿದ ಸ್ಮೃತಿ ಮಂದಾನ

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಂಗಳವಾರ ಪ್ರಕಟಿಸಿದ ಮಹಿಳಾ ಟಿ20 ಅಂತರಾಷ್ಟ್ರೀಯ ಆಟಗಾರರ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಮೂರನೇ ಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ...

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಂಗಳವಾರ ಪ್ರಕಟಿಸಿದ ಮಹಿಳಾ ಟಿ20 ಅಂತರಾಷ್ಟ್ರೀಯ ಆಟಗಾರರ ಶ್ರೇಯಾಂಕದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಮೂರನೇ ಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ ವೃತ್ತಿಜೀವನದ ಅತ್ಯುತ್ತಮ 741 ಅಂಕ ಗಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯ ಟೈ ಆದ ನಂತರ ಸೂಪರ್ ಓವರ್ ನಲ್ಲಿ ಭಾರತ ಗೆಲುವು ಸಾಧಿಸಿತ್ತು. ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಗೌರವಕ್ಕೆ ಪಾತ್ರರಾಗಿದ್ದ ಸ್ಮೃತಿ ಮಂದಾನ ಅವರು 11 ರೇಟಿಂಗ್ ಅಂಕಗಳನ್ನು ಪಡೆದಿದ್ದಾರೆ.

ಮುಂಬೈನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಸ್ಟ್ರೇಲಿಯಾದ ತಹ್ಲಿಯಾ ಮೆಕ್‌ಗ್ರಾತ್ ಅವರು ಐಸಿಸಿ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿದ್ದ ಬೆತ್ ಮೂನಿ  ಅವರನ್ನು ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ್ದಾರೆ.

ಮೂನಿ ಅವರು ಈ ವರ್ಷ ಆಗಸ್ಟ್ 3 ರಂದು ಮೆಗ್ ಲ್ಯಾನಿಂಗ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ ಏರಿದ್ದರು.

ಭಾರತದ ಇನ್ನೂ ಇಬ್ಬರು ಬ್ಯಾಟರ್‌ಗಳಾದ ಶಫಾಲಿ ಮತ್ತು ಜೆಮಿಮಾ ರೋಡ್ರಿಕ್ಸ್ ಅವರು ಟಾಪ್-10 ಟಿ20I ಬ್ಯಾಟರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!