ಟೀಂ ಇಂಡಿಯಾ 
ಕ್ರಿಕೆಟ್

ಅಂತಿಮಘಟ್ಟದಲ್ಲಿ ಟೆಸ್ಟ್: 4ನೇ ದಿನಕ್ಕೆ ಬಾಂಗ್ಲಾದೇಶ ಸ್ಕೋರ್ 272/6, ಪಂದ್ಯ ಗೆಲ್ಲಲು ಭಾರತಕ್ಕೆ 4 ವಿಕೆಟ್‌ ಅಗತ್ಯ!

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಚಟ್ಟೋಗ್ರಾಮ್‌ನಲ್ಲಿ ನಡೆಯುತ್ತಿದ್ದು ಪಂದ್ಯ ಅಂತಿಮಘಟ್ಟಕ್ಕೆ ಬಂದು ತಲುಪಿದೆ. ನಾಲ್ಕುನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಚಟ್ಟೋಗ್ರಾಮ್‌ನಲ್ಲಿ ನಡೆಯುತ್ತಿದ್ದು ಪಂದ್ಯ ಅಂತಿಮಘಟ್ಟಕ್ಕೆ ಬಂದು ತಲುಪಿದೆ. ನಾಲ್ಕುನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ನಷ್ಟಕ್ಕೆ 272 ರನ್ ಗಳಿಸಿದೆ. ಇನ್ನು ಬಾಂಗ್ಲಾದೇಶ ಗೆಲ್ಲಲು 241 ರನ್‌ಗಳ ಅಗತ್ಯವಿದೆ. ಅದೇ ಸಮಯದಲ್ಲಿ ಭಾರತ ತಂಡವು ಈ ಪಂದ್ಯವನ್ನು ಗೆಲ್ಲಲು ನಾಲ್ಕು ವಿಕೆಟ್‌ಗಳನ್ನು ಪಡೆಯಬೇಕಾಗಿದೆ.

513 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ 6 ವಿಕೆಟ್‌ ಕಳೆದುಕೊಂಡು 272 ರನ್‌ ಗಳಿಸಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ಗೆಲ್ಲಲು 241 ರನ್‌ಗಳ ಅಗತ್ಯವಿದೆ. ಇದೇ ವೇಳೆ ಟೀಂ ಇಂಡಿಯಾ ನಾಲ್ಕು ವಿಕೆಟ್ ಕಬಳಿಸಬೇಕಿದೆ. ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ 40 ಮತ್ತು ಮೆಹಿದಿ ಹಸನ್ ಮಿರಾಜ್ 9 ರನ್ ಗಳಿಸಿ ಆಡುತ್ತಿದ್ದಾರೆ.

ಇಂದು ಭಾರತದ ಪರ ಅಕ್ಷರ್ ಪಟೇಲ್ ಮೂರು ವಿಕೆಟ್ ಪಡೆದರು. ಅದೇ ಸಮಯದಲ್ಲಿ ಉಮೇಶ್ ಯಾದವ್, ರವಿಚಂದ್ರನ್ ಅಶ್ವಿನ್ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದಿದ್ದಾರೆ. ಇನ್ನು ಬಾಂಗ್ಲಾದೇಶ ಪರ ಜಾಕಿರ್ ಹಸನ್ ಶತಕ ಬಾರಿಸಿದ್ದರೆ ನಜ್ಮುಲ್ ಹಸನ್ 67 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದರು.

ಅಕ್ಷರ್ ಒಂದೇ ಓವರ್‌ನಲ್ಲಿ ಎರಡು ವಿಕೆಟ್ ಕಬಳಿಸುವ ಮೂಲಕ ಬಾಂಗ್ಲಾದೇಶ ತಂಡಕ್ಕೆ ಮಾರಕರಾಗಿದ್ದರು. ಮುಶ್ಫಿಕರ್ ವಿಕೆಟ್ ಪಡೆದ ನಂತರ, ಓವರ್‌ನ ಕೊನೆಯ ಎಸೆತದಲ್ಲಿ ನೂರುಲ್ ಹಸನ್ ವಿಕೆಟ್ ಕೀಪರ್ ಪಂತ್ ಅವರ ಸ್ಟಂಪ್ ಔಟ್ ಮಾಡಿ ಬಾಂಗ್ಲಾದೇಶಕ್ಕೆ ಆರನೇ ಆಘಾತ ನೀಡಿದರು. 3 ರನ್ ಗಳಿಸಿದ ನಂತರ ನೂರುಲ್ ಔಟಾದರು. ಬಾಂಗ್ಲಾದೇಶಕ್ಕೆ ಇನ್ನೂ 275 ರನ್‌ಗಳ ಅವಶ್ಯಕತೆಯಿದ್ದು, ಭಾರತ ನಾಲ್ಕು ವಿಕೆಟ್‌ಗಳನ್ನು ಪಡೆಯಬೇಕಿದೆ. ಅಕ್ಷರ್ ಈ ಇನ್ನಿಂಗ್ಸ್‌ನಲ್ಲಿ ಇದುವರೆಗೆ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT