ಕ್ರಿಕೆಟ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕ ಪಟ್ಟಿ: ಬಲಿಷ್ಠ ತಂಡಗಳನ್ನು ಹಿಂದಿಕ್ಕಿದ ಟೀಂ ಇಂಡಿಯಾ

Vishwanath S

ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ 188 ರನ್‌ಗಳ ಭರ್ಜರಿ ಜಯದೊಂದಿಗೆ, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2023 ರ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತ ತಂಡವು ಅದ್ಭುತ ಮುನ್ನಡೆ ಸಾಧಿಸಿದೆ. 

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಗೆಲುವಿನಿಂದ ಭಾರತ 12 ಅಂಕಗಳನ್ನು ಗಳಿಸಿದೆ. ಈಗ ಅವರ ಗೆಲುವಿನ ಶೇಕಡಾವಾರು 55.77 ಆಗಿದೆ. ಈ ಗೆಲುವಿನೊಂದಿಗೆ ಪ್ರಸ್ತುತ ಅಂಕಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನಕ್ಕೆ ತಲುಪಿದ್ದು, ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಇನ್ನು ದಕ್ಷಿಣ ಆಫ್ರಿಕಾ ಮೂರನೇ ಸ್ಥಾನದಲ್ಲಿದೆ. ಒಂದು ವೇಳೆ ದಕ್ಷಿಣ ಆಫ್ರಿಕಾ ಈ ಸರಣಿಯನ್ನು ಕಳೆದುಕೊಂಡರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವನ್ನು ಆಡುವುದು ಕನಸಾಗಿಯೇ ಉಳಿಯಲಿದೆ.

ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯ ತಂಡ ದಕ್ಷಿಣ ಆಫ್ರಿಕಾವನ್ನು ಕ್ಲೀನ್ ಸ್ವೀಪ್ ಮಾಡಿದರೆ. ಬಾಂಗ್ಲಾದೇಶ ವಿರುದ್ಧದ ಸರಣಿಯನ್ನು ಭಾರತ 2-0 ಅಂತರದಲ್ಲಿ ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲೇ ಉಳಿಯಲಿದೆ.

ಆಸ್ಟ್ರೇಲಿಯಾದ ನಂತರ ಚಾಂಪಿಯನ್‌ಶಿಪ್‌ನಲ್ಲಿ ಎರಡನೇ ಸ್ಥಾನ ಪಡೆಯುವುದನ್ನು ತಡೆಯುವ ಯಾವುದೇ ತಂಡವು ತಮ್ಮ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಹೆಣಗಾಡುತ್ತಿರುವುದು ಭಾರತೀಯ ತಂಡಕ್ಕೆ ಉತ್ತಮ ಅವಕಾಶವಾಗಿದೆ. ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತಿದೆ. 

ಅದೇ ಸಮಯದಲ್ಲಿ, ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಪಾಕಿಸ್ತಾನ ತಂಡ 2-0 ಹಿನ್ನಡೆಯಲ್ಲಿದೆ. ಅಲ್ಲದೆ ಮೂರನೇ ಟೆಸ್ಟ್ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಮಿರ್‌ಪುರದಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದರೆ ಭಾರತ ತಂಡ ಎರಡನೇ ಸ್ಥಾನದಲ್ಲಿ ಭದ್ರವಾಗಲಿದೆ.

SCROLL FOR NEXT