ರೋಹಿತ್ ಶರ್ಮಾ ಮತ್ತು ನವದೀಪ್ ಸೈನಿ 
ಕ್ರಿಕೆಟ್

IND vs BAN: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್‌ ಪಂದ್ಯದಿಂದ ರೋಹಿತ್ ಶರ್ಮಾ, ವೇಗದ ಬೌಲರ್ ನವದೀಪ್ ಸೈನಿ ಔಟ್

ಬಾಂಗ್ಲಾದೇಶದ ವಿರುದ್ಧ ಡಿಸೆಂಬರ್ 22ರಿಂದ ಮೀರ್‌ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ನವದೀಪ್ ಸೈನಿ ಹೊರಗುಳಿದಿದ್ದಾರೆ.

ಮುಂಬೈ: ಬಾಂಗ್ಲಾದೇಶದ ವಿರುದ್ಧ ಡಿಸೆಂಬರ್ 22ರಿಂದ ಮೀರ್‌ಪುರದಲ್ಲಿ ನಡೆಯಲಿರುವ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮತ್ತು ವೇಗಿ ನವದೀಪ್ ಸೈನಿ ಹೊರಗುಳಿದಿದ್ದಾರೆ.

ಢಾಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ರೋಹಿತ್ ಎಡಗೈ ಹೆಬ್ಬೆರಳಿಗೆ ಗಾಯವಾದ ಹಿನ್ನೆಲೆಯಲ್ಲಿ ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ.

ಗಾಯವಾದ ನಂತರ ರೋಹಿತ್ ಶರ್ಮಾ ಮೊದಲ ಟೆಸ್ಟ್ ಪಂದ್ಯದಿಂದಲೂ ಹೊರಗುಳಿದಿದ್ದರು.

ರೋಹಿತ್ ಶರ್ಮಾ ಅವರು ಪೂರ್ಣ ಪ್ರಮಾಣದಲ್ಲಿ ಬ್ಯಾಟಿಂಗ್ ಮತ್ತು ಫೀಲ್ಡಿಂಗ್‌ ಮಾಡುವ ಮುನ್ನ ಗಾಯವು ಸಂಪೂರ್ಣವಾಗಿ ಗುಣವಾಗಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ವೈದ್ಯಕೀಯ ತಂಡವು ಹೇಳಿದೆ. ಹೀಗಾಗಿ, ರೋಹಿತ್ ತಮ್ಮ ವಿಶ್ರಾಂತಿಯನ್ನು ಮುಂದುವರಿಸುತ್ತಾರೆ ಮತ್ತು ಬಾಂಗ್ಲಾದೇಶ ವಿರುದ್ಧದ ಎರಡನೇ ಮತ್ತು ಅಂತಿಮ ಟೆಸ್ಟ್‌ಗೆ ಲಭ್ಯವಿರುವುದಿಲ್ಲ.

ಕಿಬ್ಬೊಟ್ಟೆಯ ಸ್ನಾಯು ಸೆಳೆತದಿಂದಾಗಿ ವೇಗದ ಬೌಲರ್ ನವದೀಪ್ ಸೈನಿ ಕೂಡ ಎರಡನೇ ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದಾರೆ. ವೇಗದ ಬೌಲರ್ ಈಗ ಗಾಯದ ಹೆಚ್ಚಿನ ನಿರ್ವಹಣೆಗಾಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (ಎನ್‌ಸಿಎ) ವರದಿ ಮಾಡಲಿದ್ದಾರೆ ಎಂದು ಬಿಸಿಸಿಐ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದೆ.

ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್‌ಗೆ ನವೀಕರಿಸಿದ ಭಾರತ ತಂಡ

ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ವಿಸಿ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ಡಬ್ಲ್ಯುಕೆ), ಕೆಎಸ್ ಭರತ್ (ಡಬ್ಲ್ಯುಕೆ), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ಶಾರ್ದೂಲ್ ಠಾಕೂರ್, ಮೊಹಮ್ಮದ್. ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ಸೌರಭ್ ಕುಮಾರ್, ಜಯದೇವ್ ಉನದ್ಕತ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?