ಕೊಹ್ಲಿಯಿಂದ ಜೆರ್ಸಿ ಗಿಫ್ಟ್ ಪಡೆದ ಮಿರಾಜ್ 
ಕ್ರಿಕೆಟ್

ಬಾಂಗ್ಲಾದೇಶದ ಮೆಹದಿ ಹಸನ್ ಮಿರಾಜ್ ಗೆ ಕೊಹ್ಲಿಯಿಂದ ಟೀಂ ಇಂಡಿಯಾ ಜೆರ್ಸಿ ಉಡುಗೊರೆ

ಬಾಂಗ್ಲಾದೇಶದ ಆಲ್ ರೌಂಡರ್  ಮೆಹದಿ ಹಸನ್ ಮಿರಾಜ್ ಅವರಿಗೆ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ವಿಶೇಷವಾದ ಉಡುಗೊರೆ ನೀಡಿದ್ದಾರೆ. ಭಾನುವಾರ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಗೆದ್ದ ನಂತರ ತಮ್ಮ ಹಸ್ತಾಕ್ಷರವಿರುವ  ಟೀಂ ಇಂಡಿಯಾದ ಜೆರ್ಸಿಯನ್ನು ನೀಡಿದ್ದಾರೆ.

ಮಿರ್ ಪುರ: ಬಾಂಗ್ಲಾದೇಶದ ಆಲ್ ರೌಂಡರ್  ಮೆಹದಿ ಹಸನ್ ಮಿರಾಜ್ ಅವರಿಗೆ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ವಿಶೇಷವಾದ ಉಡುಗೊರೆ ನೀಡಿದ್ದಾರೆ. ಭಾನುವಾರ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಗೆದ್ದ ನಂತರ ತಮ್ಮ ಹಸ್ತಾಕ್ಷರವಿರುವ  ಟೀಂ ಇಂಡಿಯಾದ ಜೆರ್ಸಿಯನ್ನು ನೀಡಿದ್ದಾರೆ.

ವಿರಾಟ್ ಕೊಹ್ಲಿ ಅವರೊಂದಿಗೆ ಹೃದಯಸ್ಪರ್ಶಿ ಉಡುಗೊರೆ ಪಡೆಯುತ್ತಿರುವ ಫೋಟೋವನ್ನು ಮೆಹದಿ ಹಸನ್ ಮಿರಾಜ್  ಸಾಮಾಜಿಕ ಜಾಲತಾಣದಲ್ಲಿ ತನ್ನ ಅಭಿಮಾನಗಳೊಂದಿಗೆ ಹಂಚಿಕೊಂಡಿದ್ದಾರೆ. ಅತ್ಯುನ್ನತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರಿಂದ ವಿಶೇಷವಾದ ಸ್ಮರಣಿಕೆ ಪಡೆದಿರುವುದಾಗಿ ಮಿರಾಜ್ ಬರೆದುಕೊಂಡಿದ್ದಾರೆ.

ಬಾಂಗ್ಲಾದೇಶದಲ್ಲಿ ನಡೆದ ಭಾರತ ವಿರುದ್ಧದ ಸರಣಿಯಲ್ಲಿ ಮಿರಾಜ್ ಮಿಂಚಿದರು. ಏಕದಿನ ಸರಣಿಯಲ್ಲಿ ಬಾಂಗ್ಲಾ 2-1 ಅಂತರದಿಂದ ಗೆಲುವು ಸಾಧಿಸುವಲ್ಲಿ ಮಿರಾಜ್ ಪ್ರಮುಖ ಪಾತ್ರ ವಹಿಸಿದ್ದು, 141.00 ಸರಾಸರಿಯಲ್ಲಿ 141 ರನ್ ಗಳಿಸಿದರು. ಅಲ್ಲದೇ, ಸರಣಿಯಲ್ಲಿ ನಾಲ್ಕು ವಿಕೆಟ್ ಪಡೆಯುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಟೆಸ್ಟ್ ಸರಣಿಯಲ್ಲೂ ಉತ್ತಮ ಪ್ರದರ್ಶನ ತೋರಿದ ಮಿರಾಜ್,  ಎರಡನೇ ಟೆಸ್ಟ್ ನಲ್ಲಿ ಐದು ವಿಕೆಟ್ ಸೇರಿದಂತೆ ಒಟ್ಟಾರೇ 11 ವಿಕೆಟ್ ಕಬಳಿಸಿದರು. ಅಲ್ಲದೇ ಬ್ಯಾಟಿಂಗ್ ನಲ್ಲಿಯೂ ಅತ್ಯುತ್ತಮ ಪ್ರದರ್ಶನ ತೋರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT