ಕ್ರಿಕೆಟ್

KGF 3: ಕೆಜಿಎಫ್ ಸ್ಟಾರ್ ಯಶ್ ಭೇಟಿ ಮಾಡಿದ ಕ್ಯಾಪ್ಟನ್ ಹಾರ್ದಿಕ್, ಕೃನಾಲ್ ಪಾಂಡ್ಯ!

ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಮುಂದಿನ ಸರಣಿಗೂ ಮುನ್ ಹಾರ್ದಿಕ್ ಪಾಂಡ್ಯ ಕೆಜಿಎಫ್ ಸ್ಟಾರ್ ಯಶ್ ಅವರನ್ನು ಭೇಟಿಯಾದರು.

ಭಾರತ ಟಿ20 ತಂಡದ ನಾಯಕ ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಮುಂದಿನ ಸರಣಿಗೂ ಮುನ್ ಹಾರ್ದಿಕ್ ಪಾಂಡ್ಯ ಕೆಜಿಎಫ್ ಸ್ಟಾರ್ ಯಶ್ ಅವರನ್ನು ಭೇಟಿಯಾದರು.

ಕೆಜಿಎಫ್ ಸರಣಿಯ ಚಿತ್ರಗಳಲ್ಲಿ 'ರಾಕಿ ಭಾಯ್' ಎಂದು ಕರೆಯಲ್ಪಡುವ ಯಶ್, ಹಾರ್ದಿಕ್ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ಅವರನ್ನು ಭೇಟಿಯಾದರು. ಹಾರ್ದಿಕ್ ಅವರನ್ನು ಭೇಟಿಯಾದ ಖುಷಿಯನ್ನು ಮುಚ್ಚಿಡಲು ಸಾಧ್ಯವಾಗಲಿಲ್ಲ. ಅವರು ಇನ್ಸ್ಟಾಗ್ರಾಮ್ನಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. "ಕೆಜಿಎಫ್-3" ಎಂಬ ಶೀರ್ಷಿಕೆ ಕೊಟ್ಟಿದ್ದು ಇದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಈ ಚಿತ್ರದ ಮೂರನೇ ಭಾಗವೂ ಬರುವ ನಿರೀಕ್ಷೆಯಿದೆ. ಕೆಜಿಎಫ್ ಮೂರನೇ ಭಾಗಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಲಂಕಾ ವಿರುದ್ಧ ಟೀಂ ಇಂಡಿಯಾ ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ನಿಯಮಿತ ನಾಯಕ ರೋಹಿತ್ ಗಾಯಗೊಂಡಿರುವ ಕಾರಣ ಹಾರ್ದಿಕ್ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ.

ಹಾರ್ದಿಕ್ ಪಾಂಡ್ಯ ಶ್ರೀಲಂಕಾ ವಿರುದ್ಧದ ಏಕದಿನ ತಂಡಕ್ಕೆ ಮರಳಿದ್ದಾರೆ. ಲೋಕೇಶ್ ರಾಹುಲ್ ತಂಡದಲ್ಲಿದ್ದರೂ ಉಪನಾಯಕನನ್ನಾಗಿ ಮಾಡಲಾಗಿದೆ. ಭಾರತದ ಭವಿಷ್ಯದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಆಯ್ಕೆಗಾರರು ನೋಡುತ್ತಿರುವುದು ಸ್ಪಷ್ಟವಾಗಿದೆ. ಟೆಸ್ಟ್ ತಂಡದಲ್ಲಿ ಪಾಂಡ್ಯಗೆ ಅವಕಾಶ ಸಿಗುತ್ತಿಲ್ಲವಾದರೂ, ಏಕದಿನ ಮತ್ತು ಟಿ20ಯಲ್ಲಿ ರೋಹಿತ್ ನಂತರ ಹಾರ್ದಿಕ್ ನಾಯಕನಾಗುವ ಪ್ರಬಲ ಸ್ಪರ್ಧಿ ಎನಿಸಿಕೊಂಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel