ಜಸ್ ಪ್ರೀತ್ ಬುಮ್ರಾ 
ಕ್ರಿಕೆಟ್

India vs England: ಬ್ಯಾಟಿಂಗ್ ಬಳಿಕ ಬೌಲಿಂಗ್ ನಲ್ಲೂ ದಾಖಲೆ ಬರೆದ ಬುಮ್ರಾ

ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಒಂದೇ ಓವರ್ ನಲ್ಲಿ 35ರನ್ ಚಚ್ಚಿದ ಬುಮ್ರಾ ಇದೀಗ ಬೌಲಿಂಗ್ ನಲ್ಲಿ ಹೊಸ ದಾಖಲೆ ನಿರ್ಮಾಣ ಮಾಡಿದ್ದಾರೆ.

ಎಡ್ಜ್ ಬ್ಯಾಸ್ಟನ್: ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಒಂದೇ ಓವರ್ ನಲ್ಲಿ 35ರನ್ ಚಚ್ಚಿದ ಬುಮ್ರಾ ಇದೀಗ ಬೌಲಿಂಗ್ ನಲ್ಲಿ ಹೊಸ ದಾಖಲೆ ನಿರ್ಮಾಣ ಮಾಡಿದ್ದಾರೆ.

ಇಂಗ್ಲೆಂಡ್ ನಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತೀ ಹೆಚ್ಚು ವಿಕೆಟ್ ಕಿತ್ತ ಭಾರತೀಯ ಬೌಲರ್ ಎಂಬ ಸಾಧನೆಯನ್ನು ಜಸ್ಪ್ರೀತ್ ಬುಮ್ರಾ ಬರೆದಿದ್ದಾರೆ. ಬುಮ್ರಾ ಐದು ಪಂದ್ಯಗಳಿಂದ 21 ವಿಕೆಟ್ ಕಬಳಿಸಿದಂತಾಗಿದೆ. ಆ ಮೂಲಕ ಇಂಗ್ಲೆಂಡ್ ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಬುಮ್ರಾ ಅಗ್ರ ಸ್ಥಾನಕ್ಕೇರಿದ್ದಾರೆ. ಈ ಹಿಂದೆ ಅಗ್ರ ಸ್ಥಾನದಲ್ಲಿದ್ದ ಭುವನೇಶ್ವರ ಕುಮಾರ್ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು, ಭುವಿ 19 ವಿಕೆಟ್ ಕಿತ್ತಿದ್ದರು.

ಎಡ್ಜ್ ಬಾಸ್ಟನ್ ನಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಬುಮ್ರಾ 68 ರನ್ ನೀಡಿ ಮೂರು ವಿಕೆಟ್ ಕಿತ್ತರು. ಭುವನೇಶ್ವರ್ ಕುಮಾರ್ ಅವರು 2014ರ ಇಂಗ್ಲೆಂಡ್ ಪ್ರವಾಸದಲ್ಲಿ 19 ವಿಕೆಟ್ ಸಾಧನೆ ಮಾಡಿದ್ದರು. 2007ರ ಸರಣಿಯಲ್ಲಿ ಜಹೀರ್ ಖಾನ್ ಅವರು ಮೂರು ಪಂದ್ಯಗಳಲ್ಲಿ 18 ವಿಕೆಟ್ ಪಡೆದಿದ್ದರೆ, 2018ರಲ್ಲಿ ಇಶಾಂತ್ ಶರ್ಮಾ ಅವರು ಐದು ಪಂದ್ಯಗಳಿಂದ 18 ವಿಕೆಟ್ ಕಬಳಿಸಿದ್ದರು.

ಭಾರತ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 416 ರನ್ ಗಳಿಸಿದ್ದರೆ, ಇಂಗ್ಲೆಂಡ್ 284 ರನ್ ಗೆ ಆಲೌಟಾಗಿದೆ. ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಭಾರತ ಮೂರು ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದೆ. ಸದ್ಯ ಭಾರತ ತಂಡ 257 ರನ್ ಮುನ್ನಡೆಯಲ್ಲಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?