ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ಮೊದಲ ಟಿ-20 ಪಂದ್ಯ: ಹಾರ್ದಿಕ್ ಪಾಂಡ್ಯ ಅರ್ಧ ಶತಕ, ಇಂಗ್ಲೆಂಡ್ ಗೆ 199 ರನ್ ಗಳ ಗುರಿ ನೀಡಿದ ಭಾರತ

ಭಾರತ- ಇಂಗ್ಲೆಂಡ್ ನಡುವಣ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದ್ದು, ಇಂಗ್ಲೆಂಡ್ ಗೆಲ್ಲಲು 199 ರನ್ ಗಳ ಗುರಿ ನೀಡಿದೆ.

ಸೌತಾಂಪ್ಟನ್:  ಇಲ್ಲಿ ನಡೆದ ಭಾರತ- ಇಂಗ್ಲೆಂಡ್ ನಡುವಣ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಟೀಂ ಇಂಡಿಯಾ 8 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದ್ದು, ಇಂಗ್ಲೆಂಡ್ ಗೆಲ್ಲಲು 199 ರನ್ ಗಳ ಗುರಿ ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ 14 ಎಸೆತಗಳಲ್ಲಿ 24  ರನ್ ಗಳಿಸಿದ  ರೋಹಿತ್ ಶರ್ಮಾ ಮೊಯಿನ್ ಬೌಲಿಂಗ್ ನಲ್ಲಿ ಬಟ್ಲರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಇಶಾನ್ ಕಿಶಾನ್ 8 ರನ್ ಗಳಿಸಿ ಮೊಯಿನ್ ಬೌಲಿಂಗ್ ನಲ್ಲಿ  ಔಟಾದರು.  

ದೀಪಕ್ ಹೂಡಾ 33, ಸೂರ್ಯಕುಮಾರ್ ಯಾದವ್ 39 ರನ್ ಗಳಿಸಿ ಉತ್ತಮ ಅಡಿಪಾಯ ಹಾಕಿದರು. ನಂತರ ಬಂದ ಹಾರ್ದಿಕ್ ಪಾಂಡ್ಯ 33 ಎಸೆತಗಳಲ್ಲಿ ಆರು ಬೌಂಡರಿ ಹಾಗೂ 1 ಸಿಕ್ಸರ್ ನೊಂದಿಗೆ 51 ರನ್ ಗಳಿಸಿದರು. ಅಕ್ಷರ್ ಪಟೇಲ್ 17, ದಿನೇಶ್ ಕಾರ್ತಿಕ್ 11, ಹರ್ಷಲ್ ಪಟೇಲ್ 3 ರನ್ ಗಳಿಸಿ ರನ್ ಔಟಾದರು.

ಇಂಗ್ಲೆಂಡ್ ಪರ ಮೊಯಿನ್ ಆಲಿ, ಜೋರ್ಡಾನ್ ತಲಾ ವಿಕೆಟ್ ಪಡೆದರೆ, ಟೊಪ್ಲಿ, ಮ್ಯಾಥ್ಯೂ ಫರ್ಕಿನ್ ಸನ್ , ಮಿಲ್ಸ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video