ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

1st ODI: ಟೀಂ ಇಂಡಿಯಾ ವೇಗಿ ಬುಮ್ರಾ 5 ವಿಕೆಟ್; 4 ಡಕೌಟ್, ಇಂಗ್ಲೆಂಡ್ 110ಕ್ಕೆ ಆಲೌಟ್!

ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಮೊದಲ ಏಕದಿನ ಪಂದ್ಯದಲ್ಲಿ 110 ರನ್ ಗಳಿಗೆ ಆಲೌಟ್ ಆಗಿದೆ.

ಟೀಂ ಇಂಡಿಯಾ
Vishwanath S
Updated On : 12 Jul 2022, 8:30 pm

ಲಂಡನ್‌: ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಮೊದಲ ಏಕದಿನ ಪಂದ್ಯದಲ್ಲಿ 110 ರನ್ ಗಳಿಗೆ ಆಲೌಟ್ ಆಗಿದೆ.

ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ಇಂಡಿಯಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತ್ತು. ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಜೇಸನ್ ರಾಯ್ ಶೂನ್ಯ ಸುತ್ತಿದರೆ, ಜಾನಿ ಬೇರ್ ಸ್ಟೋ 7 ರನ್ ಗಳಿಸಿ ಬುಮ್ರಾ ಬೌಲಿಂಗ್ ನಲ್ಲಿ ಔಟಾದರು. ಜೋ ರೂಟ್ ಕೂಡ ಬುಮ್ರಾ ಬೌಲಿಂಗ್ ನಲ್ಲೇ ಶೂನ್ಯಕ್ಕೆ ನಿರ್ಗಮಿಸಿದ್ದು ತಂಡಕ್ಕೆ ಮಾರಕವಾಗಿ ಪರಿಣಮಿಸಿತು. ಬಳಿಕ ನಾಯಕ ಬೆನ್ ಸ್ಟೋಕ್ ರನ್ನು ಶಮಿ ಮೊದಲ ಎಸೆತದಲ್ಲೇ ಔಟ್ ಮಾಡಿದರು. ಬಳಿಕ ಕ್ರೀಸ್ ಗೆ ಆಗಮಿಸಿದ ಲಿಯಾಮ್ ಲಿವಿಂಗ್ ಸ್ಟೋನ್ ರನ್ನು ಬುಮ್ರಾ 8ನೇ ಓವರ್ ನ ಐದನೇ ಎಸೆತದಲ್ಲಿ ಕ್ಲೀನ್ ಬೋಲ್ಡ್ ಮಾಡಿದರು.

ಡೇವಿಡ್ ವಿಲ್ಲಿ 21 ರನ್ ಗಳಿಸಿ ತಂಡಕ್ಕೆ ಸ್ವಲ್ಪ ಚೇತರಿಕೆ ತಂದುಕೊಟ್ಟರು ಬುಮ್ರಾರ ಬೌಲಿಂಗ್ ಗೆ ಬೌಲ್ಡ್ ಆದರು. ಮೊಯಿನ್ ಅಲಿ 14 ರನ್ ಗಳಿಸಿ ಔಟಾದರೆ ಕಾರ್ಸೆ 15 ರನ್ ಗೆ ಔಟಾಗಿ ಪೆವಿಲಿಯನ್ ಸೇರಿದರು.

Advertisement

Advertisement

ಇದನ್ನೂ ಓದಿ: ಐಪಿಎಲ್ ಆಡುವಾಗ ಬೇಕಿಲ್ಲದ ವಿಶ್ರಾಂತಿ, ದೇಶವನ್ನು ಪ್ರತಿನಿಧಿಸುವಾಗ ಮಾತ್ರ ಏಕೆ ಬೇಕು?: ಕ್ರಿಕೆಟಿಗರ ವಿರುದ್ಧ ಗವಾಸ್ಕರ್ ಕಿಡಿ

ಇನ್ನು ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಬುಮ್ರಾ 6 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ 3 ಹಾಗೂ ಪ್ರಸಿದ್ಧ್ ಕೃಷ್ಣ 1 ವಿಕೆಟ್ ಪಡೆದಿದ್ದಾರೆ.

ಟಿ20 ವಿಶ್ವಕಪ್‌ಗೂ ಮುನ್ನ ಭಾರತ ಆಡಲಿರುವ ಕೊನೆಯ ಏಕದಿನ ಸರಣಿ ಇದಾಗಿದ್ದು. 'ಮೂರು ಪಂದ್ಯಗಳ ಸರಣಿ  ನಮಗೆ ಮಹತ್ವದ್ದಾಗಿದೆ' ಎಂದು ನಾಯಕ ರೋಹಿತ್‌ ಶರ್ಮಾ ಹೇಳಿದ್ದಾರೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಕೆನ್ನಿಂಗ್ಟನ್‌ನ ಓವಲ್‌ನಲ್ಲಿ ನಡೆಯುತ್ತಿದೆ. ಗಾಯದ ಸಮಸ್ಯೆಗೆ ಸಿಲುಕಿರುವ ವಿರಾಟ್‌ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement