ಇಂಗ್ಲೆಂಡ್ ತಂಡ 
ಕ್ರಿಕೆಟ್

2ನೇ ಒಡಿಐ: ಭಾರತದ ವಿರುದ್ಧ ಇಂಗ್ಲೆಂಡ್ ಗೆ 100 ರನ್ ಗಳ ಜಯ

ಲಾರ್ಡ್ಸ್ ನಲ್ಲಿ ನಡೆದ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆ 100 ರನ್ ಗಳ ಜಯ ದೊರೆತಿದೆ. 

ಲಾರ್ಡ್ಸ್: ಲಾರ್ಡ್ಸ್ ನಲ್ಲಿ ನಡೆದ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆ 100 ರನ್ ಗಳ ಜಯ ದೊರೆತಿದೆ. 

ಈ ಗೆಲುವಿನ ಮೂಲಕ ಸರಣಿಯಲ್ಲಿ ಇಂಗ್ಲೆಂಡ್ ಭಾರತದೊಂದಿಗೆ ಸಮಬಲ ಸಾಧಿಸಿದ್ದು, ಉಭಯ ತಂಡಗಳೂ ತಲಾ ಒಂದು ಪಂದ್ಯಗಳನ್ನು ಗೆದ್ದಿವೆ.ಟಾಸ್ ಗೆದ್ದು  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ ಇಂಗ್ಲೆಂಡ್ ತಂಡವನ್ನು 49 ಓವರ್ ಗಳಲ್ಲಿ 246 ರನ್ ಗಳಿಗೆ ಕಟ್ಟಿಹಾಕಿತು. 

247 ರನ್ ಗಳ ಗುರಿಯನ್ನು ಬೆನ್ನಟ್ಟಿದ ಭಾರತದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ (10 ಎಸೆತಗಳಲ್ಲಿ 0 ರನ್) ಶಿಖರ್ ಧವನ್ (26 ಎಸೆತಗಳಲ್ಲಿ 9 ರನ್) ಮುಗ್ಗರಿಸಿದ ಪರಿಣಾಮ ಭಾರತ ತಂಡ ಆರಂಭಿಕ ಅಘಾತ ಎದುರಿಸಬೇಕಾಯಿತು. 

ನಂತರ ವಿರಾಟ್ ಕೊಹ್ಲಿ (25ಎಸೆತಗಳಲ್ಲಿ 16 ರನ್) ಸಹ ನಿರಾಶೆ ಮೂಡಿಸಿದರು. ರಿಷಭ್ ಪಂತ್ ಸೇರಿದಂತೆ ಮಧ್ಯಮ ಕ್ರಮಾಂಕ ಹಾಗೂ ಕಡೆಯ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದ ಪರಿಣಾಮ ಭಾರತ 38.5 ಓವರ್ ಗಳಲ್ಲಿ 146 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಇಂಗ್ಲೆಂಡ್ ವಿರುದ್ಧ ಸೋಲೊಪ್ಪಿಕೊಂಡಿತು. ರೀಸ್ ಟೋಪ್ಲಿ 24 ರನ್ ಗಳನ್ನು ನೀಡಿ 2 ಮೇಡ್ ಇನ್ ಓವರ್, 6 ವಿಕೆಟ್ ಗಳನ್ನು ಪಡೆದು ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ