ಸಂಗ್ರಹ ಚಿತ್ರ 
ಕ್ರಿಕೆಟ್

ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಯುಎಇಗೆ ಸ್ಥಳಾಂತರ ಸಾಧ್ಯತೆ

ಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.

ಕೊಲಂಬೊ: ಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.

ರಾಜಕೀಯ ಅಸ್ಥಿರತೆ, ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಏಷ್ಯಾ ಕಪ್ ಟೂರ್ನಿಯನ್ನು ಶ್ರೀಲಂಕಾದಿಂದ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂದು ಶ್ರೀಲಂಕಾ ಕ್ರಿಕೆಟ್‌ ಸಂಸ್ಥೆಯ (ಎಸ್‌ಎಲ್‌ಸಿ) ಕಾರ್ಯದರ್ಶಿ ಮೋಹನ್ ಡಿ ಸಿಲ್ವಾ ಭಾನುವಾರ ಹೇಳಿದ್ದಾರೆ. ಟೂರ್ನಿಯನ್ನು ಯುಎಇಯಲ್ಲಿ ಆಯೋಜಿಸುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು.

ಈ ಬಾರಿ ಟಿ 20 ಮಾದರಿಯಲ್ಲಿ ನಡೆಯುತ್ತಿರುವ ಏಷ್ಯಾ ಕಪ್‌ ಪಂದ್ಯಾವಳಿಯ ಸ್ಥಳದಲ್ಲಿನ ಸಂಭವನೀಯ ಬದಲಾವಣೆಯ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಎಸ್‌ಎಲ್‌ಸಿ ಕಾರ್ಯದರ್ಶಿ ಡಿ ಸಿಲ್ವಾ, ‘ಏಷ್ಯಾ ಕಪ್ ಯುಎಇಯಲ್ಲಿ ನಡೆಯುವ ಸಾಧ್ಯತೆಯಿದೆ’ ಎಂದು ತಿಳಿಸಿದರು.

ತೀವ್ರ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸೆಣಸುತ್ತಿರುವ ಶ್ರೀಲಂಕಾದಲ್ಲಿ ವಾರದಿಂದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ, ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಮಿಲಿಟರಿ ಜೆಟ್‌ನಲ್ಲಿ ದೇಶದಿಂದ ಪಲಾಯನ ಮಾಡಿದ್ದು, ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡಿದೆ.

ಟೂರ್ನಿಯ ವೇಳಾಪಟ್ಟಿ ನಿಗದಿಯಂತೆ ನಡೆಯಲಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆಗಸ್ಟ್ 26 ರಿಂದ ಸೆಪ್ಟೆಂಬರ್ 11 ರವರೆಗೆ ಇರಲಿದೆ ಎಂದು ಅವರು ಹೇಳಿದರು.

ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಗಾನಿಸ್ತಾನ, ಮತ್ತು ಬಾಂಗ್ಲಾದೇಶ ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT