ಭಾರತ ತಂಡ 
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧದ ಸರಣಿ ಜಯ: ಐಸಿಸಿ ರ್ಯಾಂಕಿಂಗ್ ನಲ್ಲಿ 3ನೇ ಸ್ಥಾನ ಭದ್ರಪಡಿಸಿಕೊಂಡ ಟೀಂ ಇಂಡಿಯಾ!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಮೂರನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ದುಬೈ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಮೂರನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ಪುರುಷರ ಏಕದಿನ ತಂಡ ರ್ಯಾಂಕಿಂಗ್‌ನಲ್ಲಿ ಈ ಹಿಂದೆ ಪಾಕಿಸ್ತಾನವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ್ದ ಭಾರತ ತಂಡ ಇದೀಗ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ರಿಷಬ್ ಪಂತ್ ಅವರ ಶತಕದ ನೆರವಿನಿಂದ ಭಾರತವು ಭಾನುವಾರ ನಡೆದ ಇಂಗ್ಲೆಂಡ್ ವಿರುದ್ಧ ಮೂರನೇ ಪಂದ್ಯದಲ್ಲಿ ಜಯ ಗಳಿಸಿ, ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ಕೈವಶ ಮಾಡಿಕೊಂಡಿತು. ಈ ಸರಣಿ ಬಳಿಕ ಐಸಿಸಿ ತನ್ನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಪುನರ್ ಪರಿಷ್ಕರಣೆ ಮಾಡಿದ್ದು, ಪಟ್ಟಿಯಲ್ಲಿ ತನ್ನ ಅಂಕಗಳಿಕೆಯನ್ನು 109ಕ್ಕೆ ಏರಿಸಿಕೊಂಡಿರುವ ಭಾರತ ತನ್ನ ಮೂರನೇ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಉಳಿದಂತೆ ನ್ಯೂಜಿಲೆಂಡ್ 128 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಇಂಗ್ಲೆಂಡ್ 121 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಪಾಕಿಸ್ತಾನ 106 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ತಂಡ 101 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ.

ಇನ್ನು ಭಾರತ ಈ ತಿಂಗಳು ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನಾಡಲಿದ್ದು, ಆ ಮೂಲಕ ಭಾರತವು ತನ್ನ ಮುನ್ನಡೆಯನ್ನು ಮತ್ತಷ್ಟು ವಿಸ್ತರಿಸುವ ಅವಕಾಶವನ್ನು ಹೊಂದಿದೆ. ಪಾಕಿಸ್ತಾನದ ಮುಂದಿನ ODI ನಿಯೋಜನೆ ಮುಂದಿನ ತಿಂಗಳು ನೆದರ್ಲೆಂಡ್ಸ್ ವಿರುದ್ಧ ಮೂರು ಪಂದ್ಯಗಳ ಸರಣಿಯಾಗಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT