ಭಾರತ ಮಣಿಸಿದ ಆಸ್ಟ್ರೇಲಿಯಾ 
ಕ್ರಿಕೆಟ್

Commonwealth Games T20: ಮೊದಲ ಪಂದ್ಯದಲ್ಲೇ ಭಾರತ ವನಿತೆಯರ ಮಣಿಸಿದ ಆಸ್ಟ್ರೇಲಿಯಾ

ಬಹು ನಿರೀಕ್ಷಿತ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಸಮರ ಆರಂಭವಾಗಿದ್ದು, ಮೊದಲ ಪಂದ್ಯದಲ್ಲೇ ಭಾರತ ವನಿತೆಯರ ತಂಡವನ್ನು ಆಸ್ಟ್ರೇಲಿಯಾ ವನಿತೆಯರ ತಂಡ 3 ವಿಕೆಟ್ ಅಂತರದಲ್ಲಿ ಮಣಿಸಿದೆ.

ಬರ್ಮಿಂಗ್ ಹ್ಯಾಮ್: ಬಹು ನಿರೀಕ್ಷಿತ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಟಿ20 ಕ್ರಿಕೆಟ್ ಸಮರ ಆರಂಭವಾಗಿದ್ದು, ಮೊದಲ ಪಂದ್ಯದಲ್ಲೇ ಭಾರತ ವನಿತೆಯರ ತಂಡವನ್ನು ಆಸ್ಟ್ರೇಲಿಯಾ ವನಿತೆಯರ ತಂಡ 3 ವಿಕೆಟ್ ಅಂತರದಲ್ಲಿ ಮಣಿಸಿದೆ.

ಕಾಮನ್‌ವೆಲ್ತ್ ಕ್ರೀಡಾಕೂಟದ ಮೊದಲ ಟಿ20 ಕ್ರಿಕೆಟ್‌ ಪಂದ್ಯದಲ್ಲಿ ಅಮೋಘ ಆಟವಾಡಿದ ಆಸ್ಟ್ರೇಲಿಯಾ ಮಹಿಳಾ ತಂಡ ಭಾರತದ ವಿರುದ್ಧ 3 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಆಸ್ಟ್ರೇಲಿಯಾ ಮಹಿಳಾ ತಂಡದ ಆಟಗಾರ್ತಿಯರಾದ ಆ್ಯಶ್ಲೆ ಗಾರ್ಡನರ್‌ ಹಾಗೂ ಗ್ರೇಸ್ ಹ್ಯಾರಿಸ್‌ ಅಕ್ಷರಶಃ ಭಾರತದ ಕೈ ಯಿಂದ ಜಯ ಕಸಿದುಕೊಂಡರು.

ಎಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆರಂಭಿಕ ಬ್ಯಾಟರ್‌ ಶೆಫಾಲಿ ವರ್ಮಾ (48), ಸ್ಮೃತಿ ಮಂದಾನಾ (24) ಹಾಗೂ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ (52) ಅವರ ಉತ್ತಮ ಆಟದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 154 ರನ್‌ ಕಲೆಹಾಕಿತ್ತು. 

ಭಾರತ ನೀಡಿದ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿತು. ಆರಂಭಿಕರಾದ ಅಲಿಸ್ಸಾ ಹೀಲಿ ಶೂನ್ಯಕ್ಕೆ ಔಟಾದರೆ, ನಾಯಕಿ ಮೆಗ್ ಲ್ಯಾನಿಂಗ್ 8 ರನ್ ಗಳಿಸಿ ರೇಣುಕಾ ಸಿಂಗ್ ಬೌಲಿಂಗ್ ನಲ್ಲಿ ಔಟಾದರು. ತಂಡದ ಮೊತ್ತ ಕೇವಲ 34 ರನ್‌ ಆಗುವಷ್ಟರಲ್ಲಿ ಅಗ್ರ ಕ್ರಮಾಂಕದ ನಾಲ್ವರು ಬ್ಯಾಟರ್‌ಗಳಿಗೆ ಪೆವಿಲಿಯನ್‌ ಹಾದಿ ತೋರಿದ ರೇಣುಕಾ, ಭಾರತಕ್ಕೆ ಮೇಲುಗೈ ತಂದುಕೊಟ್ಟರು. ಅವರು ನಾಲ್ಕು ಓವರ್‌ಗಳಲ್ಲಿ 18 ರನ್ ಕೊಟ್ಟು 4 ವಿಕೆಟ್‌ ಕಬಳಿಸಿ ಮಿಂಚಿದರು.

ಒಂದು ಹಂತದಲ್ಲಿ 49 ರನ್‌ ಗಳಿಸುವಷ್ಟರಲ್ಲಿ 5 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಆಸ್ಟ್ರೇಲಿಯಾ, ಭಾರತಕ್ಕೆ ಸುಲಭ ತುತ್ತಾಗುವ ಭೀತಿಯಲ್ಲಿತ್ತು. ಆದರೆ, ಈ ಹಂತದಲ್ಲಿ ಜೊತೆಯಾದ ಗಾರ್ಡನರ್‌ (52) ಹಾಗೂ ಹ್ಯಾರಿಸ್‌ (37) ಎಲ್ಲರ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದರು. ಆರನೇ ವಿಕೆಟ್‌ಗೆ ಅರ್ಧಶತಕದ (51 ರನ್‌) ಜೊತೆಯಾಟವಾಡಿದ ಈ ಜೋಡಿ, ತಮ್ಮ ತಂಡದ ಇನಿಂಗ್ಸ್‌ಗೆ ಚೇತರಿಕೆ ನೀಡಿತು. ಹ್ಯಾರಿಸ್‌ ಕೇವಲ 20 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ 37 ರನ್ ಗಳಿಸಿ ಔಟಾದರು. ಗಾರ್ಡನರ್‌ 35 ಎಸೆತಗಳಲ್ಲಿ 52 ರನ್‌ ಬಾರಿಸಿ ಅಜೇಯ ಆಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಕೊನೆಯಲ್ಲಿ ಅಲಾನ ಕಿಂಗ್‌ (18 ಅಜೇಯ) ಬಿರುಸಿನ ಆಟವಾಡಿ, ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇ 3 ವಿಕೆಟ್‌ ಅಂತರದ ಜಯ ಸಾಧಿಸುವಂತೆ ಮಾಡಿದರು.

ಅಂತಿಮವಾಗಿ ಆಸ್ಟ್ರೇಲಿಯಾ ತಂಡ ಭಾರತದ ವಿರುದ್ಧ 3 ವಿಕೆಟ್ ಗಳ ಜಯ ಸಾಧಿಸಿತು. ಇದರೊಂದಿಗೆ ಆಸ್ಟ್ರೇಲಿಯಾ, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಶುಭಾರಂಭ ಮಾಡಿತು. ಭಾರತ ತಂಡವು ಜುಲೈ 31 ರಂದು ನಡೆಯುವ ತನ್ನ ಮುಂದಿನ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯಲಿದ್ದು, ಅದೇ ದಿನ ಆಸ್ಟ್ರೇಲಿಯಾ ಬಾರ್ಬಡಾಸ್‌ ವಿರುದ್ಧ ಸೆಣಸಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT