ದಕ್ಷಿಣ ಆಫ್ರಿಕಾ-ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

ಎರಡನೇ ಟಿ20 ಪಂದ್ಯ: ಟೀಂ ಇಂಡಿಯಾಗೆ ಸೋಲು, ದಕ್ಷಿಣ ಆಫ್ರಿಕಾಗೆ 2-0 ಮುನ್ನಡೆ!

ಆತಿಥೇಯ ಟೀಂ ಇಂಡಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿದೆ.

ಕಟಕ್: ಆತಿಥೇಯ ಟೀಂ ಇಂಡಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿದೆ.

ಕಟಕ್ ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 148 ರನ್ ಬಾರಿಸಿದ್ದು ಆಫ್ರಿಕಾಗೆ 149 ರನ್ ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಆಫ್ರಿಕಾ ತಂಡ ಇನ್ನು 10 ಎಸೆತ ಬಾಕಿ ಇರುವಂತೆ 6 ವಿಕೆಟ್ ನಷ್ಟಕ್ಕೆ 149 ರನ್ ಬಾರಿಸಿ ಗೆಲುವಿನ ನಗೆ ಬೀರಿತು. 

ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್ ನಲ್ಲಿ ತೆಂಬಾ ಬವುಮಾ 35, ಹೆನ್ರಿಕ್ ಕ್ಲಾಸೆನ್ 81 ರನ್ ಹಾಗೂ ಡೇವಿಡ್ ಮಿಲ್ಲರ್ ಅಜೇಯ 20 ರನ್ ಬಾರಿಸಿದ್ದಾರೆ. ಭುವನೇಶ್ವರ್ ಕುಮಾರ್ 4, ಚಹಾಲ್ ಮತ್ತು ಹರ್ಷಲ್ ಪಟೇಲ್ ತಲಾ 1 ವಿಕೆಟ್ ಪಡೆದಿದ್ದಾರೆ.

ಭಾರತ ಪರ ಬ್ಯಾಟಿಂಗ್ ಆರಂಭಿಸಿದ ರಿತುರಾಜ್ ಗಾಯ್ಕವಾಡ್ 1 ರನ್ ಗೆ ಔಟಾದರೆ, ಇಶಾನ್ ಕಿಶನ್ 34 ರನ್ ಬಾರಿಸಿದರು. ನಂತರ ಬಂದ ಶ್ರೇಯಸ್ ಅಯ್ಯರ್ 40 ರನ್ ಸಿಡಿಸಿದರು. ಇನ್ನು ದಿನೇಶ್ ಕಾರ್ತಿಕ್ ಅಜೇಯ 30 ರನ್ ಹಾಗೂ ಹರ್ಷಲ್ ಪಟೇಲ್ ಅಜೇಯ 12 ರನ್ ಬಾರಿಸಿದ್ದಾರೆ. 

ದಕ್ಷಿಣ ಆಫ್ರಿಕಾ ಪರ ಬೌಲಿಂಗ್ ನಲ್ಲಿ ಅನ್ರಿಚ್ ನಾರ್ಟ್ಜೆ 2, ಕಾಗಿಸೋ ರಬಾಡ, ಪರ್ನೆಲ್ ಮತ್ತು ಕೇಶವ್ ಮಹಾರಾಜ್ ತಲಾ 1 ವಿಕೆಟ್ ಪಡೆದಿದ್ದಾರೆ.

ಐದು ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ 2-0 ಮುನ್ನಡೆ ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!