ಪಾಕಿಸ್ತಾನ vs ಭಾರತ 
ಕ್ರಿಕೆಟ್

ಕ್ರಿಕೆಟ್ ಏಕದಿನ ರ್ಯಾಕಿಂಗ್: ವಿಂಡೀಸ್ ವಿರುದ್ಧ ಕ್ಲೀನ್ ಸ್ವೀಪ್, ಭಾರತ ಹಿಂದಿಕ್ಕಿದ ಪಾಕಿಸ್ತಾನ!!

ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ ಪಾಕಿಸ್ತಾನ ತಂಡ ಐಸಿಸಿ ಏಕದಿನ ತಂಡಗಳ ರ್ಯಾಂಕಿಂಗ್ ನಲ್ಲಿ ಭಾರತವನ್ನು ಹಿಂದಿಕ್ಕಿದೆ.

ದುಬೈ: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ ಪಾಕಿಸ್ತಾನ ತಂಡ ಐಸಿಸಿ ಏಕದಿನ ತಂಡಗಳ ರ್ಯಾಂಕಿಂಗ್ ನಲ್ಲಿ ಭಾರತವನ್ನು ಹಿಂದಿಕ್ಕಿದೆ.

ಹೌದು.. ಸೋಮವಾರ ಐಸಿಸಿ ಪರಿಷ್ಕೃತ ಏಕದಿನ ತಂಡಗಳ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ನಾಯಕ ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ತಂಡ ಟೀಂ ಇಂಡಿಯಾವನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೇರಿದೆ. ವಿಂಡೀಸ್ ವಿರುದ್ಧ ಸರಣಿಗೂ ಮೊದಲು 104 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದ್ದ ಪಾಕಿಸ್ತಾನ ತಂಡ ವಿಂಡೀಸ್ ವಿರುದ್ಧದ ಸರಣಿಯ ಎಲ್ಲ ಪಂದ್ಯಗಳನ್ನೂ ಗೆದ್ದು 2 ಅಂಕಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡು ನಾಲ್ಕನೇ ಸ್ಥಾನಕ್ಕೇರಿದೆ. 105 ಅಂಕಗಳೊಂದಿಗೆ ಭಾರತ ತಂಡ 5ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.

ಉಳಿದಂತೆ 125 ಅಂಕಗಳೊಂದಿಗೆ ನ್ಯೂಜಿಲೆಂಡ್ ತಂಡ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, 124 ಅಂಕಗಳಿರುವ ಇಂಗ್ಲೆಂಡ್ 2 ಮತ್ತು 107 ಅಂಕಗಳಿರುವ ಆಸ್ಚ್ರೇಲಿಯಾ ತಂಡ 3ನೇ ಸ್ಥಾನದಲ್ಲಿ ಮುಂದುವರೆದಿವೆ. ಪಾಕಿಸ್ತಾನ ಮತ್ತು ಭಾರತ ಕ್ರಮವಾಗಿ 4 ಮತ್ತು 5ನೇ ಸ್ಥಾನದಲ್ಲಿದ್ದರೆ, ನಂತರದ ಸ್ಥಾನಗಳಲ್ಲಿ ದಕ್ಷಿಣ ಆಫ್ರಿಕಾ (99 ಅಂಕ), ಬಾಂಗ್ಲಾದೇಶ (95 ಅಂಕ), ವೆಸ್ಟ್ ಇಂಡೀಸ್ (87) ತಂಡಗಳಿವೆ.

ಬಾಬರ್ ಆಜಂ ನಂ1 ಬ್ಯಾಟರ್
ಇನ್ನು ಏಕದಿನ ಬ್ಯಾಟರ್ ಗಳ ರ್ಯಾಂಕಿಂಗ್ ನಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ಭಾರತ ತಂಡದ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಮತ್ತೋರ್ವ ಬ್ಯಾಟರ್ ಇಮಾಮ್ ಉಲ್ ಹಕ್ 3ನೇ ಸ್ಥಾನದಲ್ಲಿದ್ದು, ಭಾರತದ ರೋಹಿತ್ ಶರ್ಮಾ 4ನೇ ಸ್ಥಾನದಲ್ಲಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು: ಆತಂಕ ಪಡುವ ಅಗತ್ಯವಿಲ್ಲ ಎಂದ ಹೆಚ್​​ಡಿ ಕುಮಾರಸ್ವಾಮಿ, ಆಸ್ಪತ್ರೆ ಬುಲೆಟಿನ್ ಬಿಡುಗಡೆ

ಮತ್ತೆ ಕೋವಿಡ್ ಅಬ್ಬರ: ಆಂಧ್ರದಲ್ಲಿ ನಾಲ್ವರು ಬಲಿ; ರಾಜ್ಯದ ಗಡಿಭಾಗದಲ್ಲಿ ಹೈ ಅಲರ್ಟ್, 8 ಮಾರ್ಗಗಳಲ್ಲಿ ತೀವ್ರ ತಪಾಸಣೆ!

ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ Sir Garry Sobers ನಿಧನ, 6 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್!

ಯಲಹಂಕದಲ್ಲಿ ಭೀಕರ ಅಪಘಾತ, ಟ್ಯಾಂಕರ್ ಢಿಕ್ಕಿ,: ಶಾಲೆಗೆ ಮೊಮ್ಮಕ್ಕಳ ಬಿಡಲು ಹೋಗಿದ್ದ ವೃದ್ಧ ದಾರುಣ ಸಾವು! Video

'ಭೂಮಿ ಮೇಲಿನ ಎಲ್ಲರೂ ಹಿಂದೂಗಳೇ, ಧರ್ಮ ಬದಲಾವಣೆ ತಂದೆ ಬದಲಿಸಿದಂತೆ': ಆಟೋ ಮೇಲಿನ ಬರಹ ವೈರಲ್, ಚಾಲಕನಿಗೆ ಬೆದರಿಕೆ!