ಟೀಂ ಇಂಡಿಯಾ 
ಕ್ರಿಕೆಟ್

3ನೇ ಟಿ20 ಪಂದ್ಯ ಗೆಲ್ಲುವ ಮೂಲಕ ಸರಣಿ ಜೀವಂತವಿರಿಸಿದ ಟೀಂ ಇಂಡಿಯಾ!

ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ.

ವಿಶಾಖಪಟ್ಟಣಂ: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಟೀಂ ಇಂಡಿಯಾ ಮೂರನೇ ಟಿ20 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ.

ವಿಶಾಖಪಟ್ಟಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ  ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 179 ರನ್ ಪೇರಿಸಿದ್ದು ದಕ್ಷಿಣ ಆಫ್ರಿಕಾಗೆ 180 ರನ್ ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 131 ರನ್ ಗಳಿಗೆ ಆಲೌಟ್ ಆಗಿದ್ದು 48 ರನ್ ಗಳಿಂದ ಸೋಲು ಕಂಡಿದೆ.

ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್ ಮಾಡಿದ್ದ ತೆಂಬಾ ಬವುಮಾ 8, ರೀಜಾ ಹೆಂಡ್ರಿಕ್ಸ್ 23, ಡ್ವೈನ್ ಪ್ರಿಟೋರಿಯಸ್  20, ಹೆನ್ರಿಚ್ ಕ್ಲಾಸೆನ್ 29, ಪರ್ಲೆನ್ ಅಜೇಯ 22 ರನ್ ಬಾರಿಸಿದ್ದಾರೆ.

ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹರ್ಷಲ್ ಪಟೇಲ್ 4, ಯಜುವೇಂದ್ರ ಚಹಾಲ್ 3, ಭುವನೇಶ್ವರ್ ಕುಮಾರ್ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದಿದ್ದಾರೆ.

ಟೀಂ ಇಂಡಿಯಾ ಪರ ರಿತುರಾಜ್ ಗಾಯಕ್ವಾಡ್ 57, ಇಶಾನ್ ಕಿಶನ್ 54, ಶ್ರೇಯಸ್ ಅಯ್ಯರ್ 14, ಹಾರ್ದಿಕ್ ಪಾಂಡ್ಯ ಅಜೇಯ 31 ರನ್ ಬಾರಿಸಿದ್ದಾರೆ. 

ದಕ್ಷಿಣ ಆಫ್ರಿಕಾ ಪರ ಬೌಲಿಂಗ್ ನಲ್ಲಿ ಡ್ವೈನ್ ಪ್ರಿಟೋರಿಯಸ್ 2, ರಬಾಡಾ, ಶಮ್ಸಿ ಮತ್ತು ಕೇಶವ್ ಮಹಾರಾಜ್ ತಲಾ 1 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!