ಆರಗ ಜ್ಞಾನೇಂದ್ರ 
ಕ್ರಿಕೆಟ್

ಭಾನುವಾರ ಬೆಂಗಳೂರಲ್ಲಿ ಟಿ-20 ಪಂದ್ಯ: ಭದ್ರತೆ ಪರಿಶೀಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಇದೇ ಭಾನುವಾರದಂದು ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T-20 ಕ್ರಿಕೆಟ್ ಪಂದ್ಯದ ಹಿನ್ನೆಲೆಯಲ್ಲಿ...

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಇದೇ ಭಾನುವಾರದಂದು ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ T-20 ಕ್ರಿಕೆಟ್ ಪಂದ್ಯದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಲಾದ ರಕ್ಷಣೆ ಮತ್ತು ಭದ್ರತಾ ವ್ಯವಸ್ಥೆಯ ಮುಂಜಾಗರೂಕತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳಾದ ರೋಜರ್ ಬಿನ್ನಿ, ಸಂತೋಷ್ ಮೆನನ್, ವಿನಯ್ ಮೃತ್ಯುಂಜಯ, ಅಭಿರಾಮ್, ಕಾರ್ತಿಕ್,  ಡಿಎಸ್ ಅರುಣ್ ಹಾಗೂ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ KSCA ಅಧ್ಯಕ್ಷ ರೋಜರ್ ಬಿನ್ನಿಯವರು, ಸಚಿವರಿಗೆ ಮನವಿಯನ್ನು ಸಲ್ಲಿಸಿ, ಐದು ದಿನಗಳ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಪಂದ್ಯಗಳಿಗೆ ಪೊಲೀಸ್ ಇಲಾಖೆ, ವಿಧಿಸುವ ಭದ್ರತಾ ಶುಲ್ಕವನ್ನು ನಾಲ್ಕು ಪಟ್ಟು ಹೆಚ್ಚಿಸಿದ್ದು, ಅದನ್ನು ಪರಿಷ್ಕರಿಸಬೇಕೆಂದು ಕೋರಿಕೆ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಸಚಿವರು, ಅಧಿಕಾರಿಗಳ ಜತೆ ಇದರ ಬಗ್ಗೆ ಚರ್ಚಿಸಿ, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್